ರಾಷ್ಟ್ರೀಯ

ಜನರ ತೀರ್ಪು ಗೌರವಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr


ಹೊಸದಿಲ್ಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು, ಜನರ ತೀರ್ಪನ್ನು ವಿನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ತಮಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಛತ್ತೀಸ್‌ಗಢ, ಮಧ್ಯ ಪ್ರದೇಶ ಮತ್ತು ರಾಜಸ್ಥಾನ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇದೇ ವೇಳೆ, ತೆಲಂಗಾಣದಲ್ಲಿ ಟಿಆರ್‌ಎಸ್‌ ಗೆಲುವಿಗಾಗಿ ಕೆಸಿಆರ್‌ ಅವರನ್ನು ಅಭಿನಂದಿಸಿದ್ದಾರೆ. ಮಿಜೋರಾಂನಲ್ಲಿ ಮಿಜೋ ನ್ಯಾಷನಲ್‌ ಫ್ರಾಂಟ್‌ ಗೆಲುವನ್ನೂ ಹಾಗೂ ಕಾಂಗ್ರೆಸ್‌ ಪಕ್ಷದ ವಿಜಯವನ್ನೂ ಅವರು ಅಭಿನಂದಿಸಿದ್ದಾರೆ.

ಕಾರ್ಯಕರ್ತರಿಗೆ ಆಭಾರಿ: ಪಂಚ ರಾಜ್ಯಗಳ ಚುನಾವಣೆಗಾಗಿ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಆಭಾರಿಯಾಗಿರುವುದಾಗಿ ಮೋದಿ ಹೇಳಿದ್ದಾರೆ.

”ಸೋಲು-ಗೆಲುವು ಎಂಬುದು ಜೀವನದ ಅವಿಭಾಜ್ಯ ಅಂಗ. ಇಂದಿನ ಚುನಾವಣಾ ಫಲಿತಾಂಶವು ದೇಶದ ಅಭಿವೃದ್ಧಿಗಾಗಿ ಮತ್ತಷ್ಟು ದುಡಿಯಲು ಮತ್ತು ಜನರಿಗಾಗಿ ಮತ್ತಷ್ಟು ಸೇವೆ ಸಲ್ಲಿಸಲು ನಮ್ಮ ಸಂಕಲ್ಪವನ್ನು ಇಮ್ಮಡಿಗೊಳಿಸಿದೆ,” ಎಂದು ಮೋದಿ ಹೇಳಿದ್ದಾರೆ.

Comments are closed.