ರಾಷ್ಟ್ರೀಯ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ಗೆ ಬೆಂಬಲ ಘೋಷಿಸಿದ ಮಾಯಾವತಿ!

Pinterest LinkedIn Tumblr


ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ವಿಧಾನಸಭಾ ಮತ ಏಣಿಕೆ ಬುಧವಾರ ಬೆಳಗ್ಗೆ ಅಂತ್ಯಗೊಂಡಿದೆ. ಅಂತಿಮ ಫ‌ಲಿತಾಂಶದಲ್ಲಿ 114 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಬಹು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರಳ ಬಹುಮತಕ್ಕೆ 2 ಸ್ಥಾನ ಕಡಿಮೆಯಿದೆ. ಇದೀಗ ಬಿಎಸ್​ಪಿ ನಾಯಕಿ ಮಾಯಾವತಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ಗೆ ಬೆಂಬಲ ವ್ಯಕ್ತಪಡಿಸುವುದಾಗಿ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸುವ ಮೂಲಕ ಬಿಎಸ್​ಪಿ ನಾಯಕಿ ಮಾಯಾವತಿ ಸ್ವತಃ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ. ಮಧ್ಯಪ್ರದೇಶ ಚುನಾವಣೆಯಲ್ಲಿ ಬಿಎಸ್​ಪಿ 2 ಸ್ಥಾನಗಳನ್ನು ಗೆದ್ದಿದ್ದು ತಾವು ಕಾಂಗ್ರೆಸ್​ಗೆ ಬೆಂಬಲ ನೀಡುತ್ತೇವೆ ಎಂದು ಮಾಯಾವತಿ ತಿಳಿಸಿದ್ದಾರೆ. ಈ ಬೆಂಬಲದೊಂದಿಗೆ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 116 ಕಾಂಗ್ರೆಸ್​ಗೆ ದೊರೆತಿದೆ.

114 ಸ್ಥಾನ ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದರಿಂದ ತಮಗೇ ಸರಕಾರ ರಚಿಸಲು ಅವಕಾಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಮಲ್ ನಾಥ್ ಅವರು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರಿಗೆ ಮಂಗಳವಾರ ರಾತ್ರಿಯೇ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮ್ಮ ಬಳಿ ಎಲ್ಲ ಸ್ವತಂತ್ರ ಅಭ್ಯರ್ಥಿಗಳ ಬೆಂಬಲವಿದೆ. ತಮ್ಮ ಭೇಟಿಗೆ ಅನುಮತಿ ನೀಡಬೇಕೆಂದು ಕೋರಿ ಕಮಲ್ ನಾಥ್ ಅವರು ಪತ್ರ ಬರೆದಿದ್ದಾರೆ.

Comments are closed.