
ನವದೆಹಲಿ: 1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಜ್ಜನ್ ಕುಮಾರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. “ನನ್ನ ವಿರುದ್ಧ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ನಾನು ಈ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಸಜ್ಜನ್ ಕುಮಾರ್ ತಿಳಿಸಿದ್ದಾರೆ.
ಇಂದಿರಾ ಗಾಂಧಿ ಹತ್ಯೆಯ ನಂತರ 1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಸಜ್ಜನ್ ಕುಮಾರ್ ಪಾತ್ರ ಸಾಬೀತಾಗಿದ್ದರಿಂದ, ಪ್ರಕರಣದಲ್ಲಿ ಆತ ದೋಷಿ ಎಂದು ದೆಹಲಿ ಹೈಕೋರ್ಟ್ ಡಿ.17 ರಂದು ತೀರ್ಪು ಪ್ರಕಟಿಸಿತ್ತು.
Comments are closed.