ರಾಷ್ಟ್ರೀಯ

ರಾಮಮಂದಿರ ಬಿಜೆಪಿಯಿಂದ ಮಾತ್ರ ನಿರ್ಮಾಣ ಸಾಧ್ಯ; ಯೋಗಿ

Pinterest LinkedIn Tumblr


ನವದೆಹಲಿ: ಒಂದೆಡೆ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಶಿವಸೇನೆ, ವಿಎಚ್​ಪಿ ನೇತೃತ್ವದಲ್ಲಿ ಜನಾಗ್ರಹ ಸಮಾವೇಶಗಳ ನಡೆಯುತ್ತಿವೆ, ಇನ್ನೊಂದೆಡೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿಕೆ ನೀಡುತ್ತಿದ್ಧಾರೆ. ಇಂದು ಕೂಡ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ರಾಮಮಂದಿರ ನಿರ್ಮಾಣ ನಮ್ಮಿಂದಲೇ ಸಾಧ್ಯ ಎಂದು ಹೇಳಿದ್ಧಾರೆ. ಈ ಮೂಲಕ ನಾವು ಮತ್ತೆ ಅಧಿಕಾರಕ್ಕೆ ಬಂದಲ್ಲಿ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದ್ಧಾರೆ ಎನ್ನಲಾಗಿದೆ.

ಲಕ್ನೋದಲ್ಲಿ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರನ್ನು ಉದ್ಧೇಶಿಸಿ ಮಾತಾಡಿದ ಸಿಎಂ ಯೋಗಿ ಆದಿತ್ಯನಾಥ್​ ಅವರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ. ಯಾರು ಏನೇ ಹೇಳಲಿ, ಮಂದಿರ ನಿರ್ಮಾಣ ಮಾಡಿಯೇ ತೀರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಹಾಗಾಗಿ ನಮ್ಮ ಮೇಲೆ ನೀವು ಭರವಸೆ ಇಡಿ ಎಂದು ಜನತೆಗೆ ಉತ್ತರ ಪ್ರದೇಶ ಸಿಎಂ ಹೇಳಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿಯೇ ಸಭೆಯಲ್ಲಿ ನೆರೆದಿದ್ದ ಜನತೆ, ಯಾರು ಮಂದಿರ ನಿರ್ಮಿಸುತ್ತಾರೆ, ಅವರಿಗೆ ಮಾತ್ರ ನಮ್ಮ ಮತ ಎಂದು ಘೋಷಣೆ ಕೂಗಿದ್ಧಾರೆ ಎನ್ನುತ್ತಿವೆ ಮೂಲಗಳು.

ಇತ್ತೀಚೆಗಷ್ಟೇ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಮಾಡುತ್ತೇವೆ ಎಂಬ ಭರವಸೆ ನೀಡಿದ್ದು ನೀವೆ, ನಾವೇನು ವಿಶೇಷವಾಗಿ ಭಿಕ್ಷೆ ಬೇಡುತ್ತಿಲ್ಲ ಎಂದು ಆರ್​ಎಸ್​ಎಸ್​ ನಾಯಕ ಭಯ್ಯಾಜಿ ಬಿಜೆಪಿಗೆ ತಪರಾಕಿ ಬಾರಿಸಿದ್ದರು. ಅಲ್ಲದೇ ಅಗತ್ಯ ಬಿದ್ದಲ್ಲಿ ಮಂದಿರ ನಿರ್ಮಾಣಕ್ಕೆ ನೂತನ ಕಾನೂನು ರೂಪಿಸಿ. ಜನರಿಗೆ ನೀವು ನೀಡಿದ ಭರವಸೆಯನ್ನು ಈಡೇರಿಸಿ ಎಂದು ಬಿಜೆಪಿಗೆ ಭಯ್ಯಾಜಿ ಆಗ್ರಹಿಸಿದ್ದರು.

ಹಾಗೆಯೇ ಮಾತು ಮುಂದುವರೆಸಿದ್ದ ಇವರು, ರಾಮಮಂದಿರ ನಿರ್ಮಾಣದ ಕೂಗು ದೆಹಲಿ ಮುಟ್ಟಿದೆ. ಕೇಂದ್ರ ಸರ್ಕಾರದ ವಿರುದ್ಧ ವಿಎಚ್​​ಪಿ, ಶಿವಸೇನೆ ಸೇರಿದಂತೆ ಹಿಂದೂಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಜೊತೆಗೆ ಮಂದಿರ ನಿರ್ಮಾಣ ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿವೆ. ಹೀಗಾಗಿಯೇ ದೆಹಲಿಯಲ್ಲಿ ವಿಎಚ್​​ಪಿಯಿಂದ ರಾಮಮಂದಿರಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥ ನಡೆಸಿ ಸಮಾವೇಶವನ್ನು ಆಯೋಜಿಸಲಾಗಿದೆ. ನೀವು ನಮ್ಮ ಮನವಿ ಸ್ವೀಕರಿಸಿ ಮಂದಿರ ನಿರ್ಮಿಸಿ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹಿರಿಯ ಆರ್​ಎಸ್​ಎಸ್​ ನಾಯಕ ಭಯ್ಯಾಜಿ ಜೋಷಿಯವರು ಗುಡುಗಿದ್ದಾರೆ.

ಏನಿದು ಕೇಸ್​​: ಒಂದು ಕಾಲದಲ್ಲಿಮೊಘಲ್ ದೊರೆ ಬಾಬರ್ ಅವರು ಅಯೋಧ್ಯಾದಲ್ಲಿ 1528ರಲ್ಲಿ ಬಾಬ್ರಿ ಮಸೀದಿ ನಿರ್ಮಿಸಿದ್ದರು. ಆದರೆ, ಹಿಂದೂ ಸಂಘಟನೆಗಳು ಡಿಸೆಂಬರ್ 06, 1992 ರಂದು ಬಾಬ್ರಿ ಮಸೀದಿಯನ್ನು ಕೆಡವಿದರು ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಈ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಹಿಂದೂಪರ ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

ಅಲಹಬಾದ್​​ ಹೈಕೋರ್ಟ್​​ ತೀರ್ಪು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಅಲ್ಲದೇ ಅಯೋಧ್ಯೆಯಲ್ಲಿನ ವಿವಾದಿತ ಜಾಗ(2.77 ಎಕರೆ)ದ ಮೇಲೆ ಹಿಂದೂ(ರಾಮ್ ಲಲ್ಲಾ), ಮುಸ್ಲಿಂ(ಸುನ್ನಿ ವಕ್ಫ್ ಮಂಡಳಿ) ಹಾಗೂ ನಿರ್ಮೋಹಿ ಅಖಾರಕ್ಕೆ ಸಮಾನವಾದ ಅಧಿಕಾರವಿದೆ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಸುಪ್ರೀಂಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ಧಾರೆ.

Comments are closed.