ರಾಷ್ಟ್ರೀಯ

ದೇಶದ ಅತ್ಯಂದತ ಉದ್ದದ ರೈಲು ಮತ್ತು ರಸ್ತೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

Pinterest LinkedIn Tumblr

ಬೋಗಿ ಬೀಲ್‌: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ನಿರ್ಮಿಸಿರುವ ಏಷ್ಯಾದ ಎರಡನೇ ಅತಿ ಉದ್ದ ಹಾಗೂ ದೇಶದ ಅತ್ಯಂದತ ಉದ್ದದ (4.9 ಕಿ.ಮೀ) ರೈಲು ಮತ್ತು ರಸ್ತೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಅಸ್ಸಾಂನಿಂದ ಅರುಣಾಚಲ ಪ್ರದೇಶದ ನೆಹರ್ ಲಗೂನ್ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಳಿಸಿದರು.

5,900 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿ ಈ ಸೇತುವೆಗೆ 1997, ಜನವರಿ 22ರಂದು ಅಂದಿನ ಪ್ರಧಾನಿ ಎಚ್‌.ಡಿ. ದೇವೇಗೌಡರು ಶಂಕುಸ್ಥಾಪನೆ ಮಾಡಿದ್ದರು. ನಂತರ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ 2002ರಲ್ಲಿ ಸೇತುವೆಯ ಕಾಮಗಾರಿ ಆರಂಭಿಸಿತು.

ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ನಿರ್ಮಿಸಲಾದ ಈ ಬೋಗಿಬೀಲ್ ಸೇತುವೆ ತುರ್ತು ಸಂದರ್ಭದಲ್ಲಿ ಯುದ್ಧ ವಿಮಾನವನ್ನು ಕೂಡ ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡುವಷ್ಟು ಸುಭದ್ರವಾಗಿದೆ. ಪೂರ್ಣವಾಗಿ ವೆಲ್ಡಿಂಗ್ ಮೂಲಕ ನಿರ್ಮಿಸಿದ ದೇಶದ ಏಕೈಕ ಹಾಗೂ ಮೊದಲ ಸೇತುವೆ ಇದಾಗಿದೆ.

Comments are closed.