ರಾಷ್ಟ್ರೀಯ

ಮೇಕೆದಾಟು ವಿವಾದಕ್ಕೆ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಂಧಾನಕ್ಕೆ ನಿತಿನ್ ಗಡ್ಕರಿ ಸಾರಥ್ಯ

Pinterest LinkedIn Tumblr


ನವದೆಹಲಿ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲ ಇದ್ದು, ಎರಡೂ ರಾಜ್ಯಗಳ ಸಿಎಂಗಳ ಸಭೆ ನಡೆಸಿ ಸಂಧಾನ ಮಾಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿಗೆ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧಿಸುತ್ತಿರುವುದನ್ನು ಖಂಡಿಸಿ ನಾಳೆ ಸಂಸತ್ ಭವನದ ಎದುರು ರಾಜ್ಯದ ಎಲ್ಲಾ ಸಂಸದರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭೆಯ ಎಲ್ಲ ಸಂಸದರು ಭಾಗಿಯಾಗಲಿದ್ದಾರೆ. ಕಳೆದ ಗುರುವಾರ ನಡೆದ ಸರ್ವಪಕ್ಷ ಸಂಸದರ ಸಭೆಯಲ್ಲಿ ತಮಿಳುನಾಡು ನಡೆ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಅದರಂತೆ ರಾಜ್ಯದ ಎಲ್ಲಾ ಸಂಸದರು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವಂತೆ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು ನವದೆಹಲಿಯಲ್ಲಿ ಕೇಂದ್ರ ಭೂಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಉಪಸ್ಥಿತರಿದ್ದರು.

ಚಳಿಗಾಲದ ಸಂಸತ್ ಅಧಿವೇಶನ ಆರಂಭದಿಂದಲೂ ತಮಿಳುನಾಡಿನ ಸಂಸದರು ಸಂಸತ್‍ನ ಒಳಗೂ ಮತ್ತು ಹೊರಗೂ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು. ಮೇಕೆದಾಟು ಯೋಜನೆ ತಮಿಳುನಾಡಿಗೆ ಮಾರಕವಾಗಲಿದ್ದು. ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಹಾಗೂ ಜಲ ಆಯೋಗ ನೀಡಿರುವ ಆರಂಭಿಕ ಒಪ್ಪಿಗೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದ್ದರು. ತಮಿಳುನಾಡಿನ ಈ ಹೋರಾಟಕ್ಕೆ ಪ್ರತಿ ಹೋರಾಟ ರೂಪಿಸಲು ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಸದರ ಸಭೆ ನಡೆಸಿ ಸಂಸತ್ ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.

Comments are closed.