ರಾಷ್ಟ್ರೀಯ

ಪೆಟ್ರೋಲ್ ದರ 5 ರಿಂದ 7 ಪೈಸೆಯಷ್ಟು, ಡೀಸೆಲ್ ದರ 6 ರಿಂದ 7 ಪೈಸೆಯಷ್ಟು ಇಳಿಕೆ

Pinterest LinkedIn Tumblr

ಮುಂಬೈ: ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 5 ರಿಂದ 7 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 6 ರಿಂದ 7 ಪೈಸೆಯಷ್ಟು ಇಳಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 69.74ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 63.76 ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪ್ರತೀ ಲೀಟರ್ ಪೆಟ್ರೋಲ್ ದರ 75.33 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ ಪ್ರತೀ ಲೀಟರ್ ಗೆ 66.69ಕ್ಕೆ ಇಳಿಕೆಯಾಗಿದೆ.

ಕೋಲ್ಕತಾದಲ್ಲಿ ಪೆಟ್ರೋಲ್ ದರ ಕ್ರಮವಾಗಿ 71.81 ರೂ ಗೆ ಮತ್ತು 65.49 ರೂಗಳಿಗೆ ಇಳಿಕೆಯಾಗಿದೆ. ಚೆನ್ನೈನಲ್ಲಿ ಇಂದಿನ ಪೆಟ್ರೋಲ್‌ ಬೆಲೆ 72.32 ರೂ. (6 ಪೈಸೆ ಇಳಿಕೆ), ಡೀಸೆಲ್‌ ಬೆಲೆ 67.28 ರೂ (7 ಪೈಸೆ ಇಳಿಕೆ) ಆಗಿದೆ.

ಬೆಂಗಳೂರಿನಲ್ಲಿಂದು ಪೆಟ್ರೋಲ್ ಬೆಲೆ ರೂ.70.27
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 70.27ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 64.08 ರೂಗೆ ಇಳಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ.

ಅಂತಾರಾಷ್ಟ್ರೀಯ ಕಚ್ಛಾ ತೈಲ ದರ ಇಳಿಕೆಯೇ ತೈಲದರಗಳ ಇಳಿಕೆಗೆ ಕಾರಣ ಎನ್ನಲಾಗುತ್ತಿದ್ದು, ಮುಂದಿನ ದಿನಗಳ ದರ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಉಚಿತ ಎಸ್ಎಂಎಸ್ ಮಾಡಿ, ತೈಲೋತ್ಪನ್ನಗಳ ದರ ತಿಳಿಯಿರಿ
ಇನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆಗೆ ಗ್ರಾಹಕರು ಎಸ್ಎಂಎಸ್ ಕಳುಹಿಸುವ ಮೂಲಕ ಆಯಾ ನಗರದಲ್ಲಿನ ದರಗಳ ಮಾಹಿತಿ ಪಡೆಯಬಹುದು. ಈ ಬಗ್ಗೆ ಸಂಸ್ಥೆ ತನ್ನ ವೆಬೈ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಗ್ರಾಹಕರು https://www.iocl.com/Products/PetrolDieselPrices.aspx ಗೆ ಭೇಟಿ 92249 92249 ನಂಬರ್ ಗೆ ಆಯಾ ಜಿಲ್ಲೆಯ ಕೋಡ್ ಅನ್ನು ಎಸ್ಎಂಎಸ್ ಮಾಡಿ ದರಗಳ ಮಾಹಿತಿ ಪಡೆಯಬಹುದು.

Comments are closed.