ರಾಷ್ಟ್ರೀಯ

ಕಾಂಗ್ರೆಸ್‌ ಜತೆ ಮೈತ್ರಿಯಿಲ್ಲ ಎಂದ ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್

Pinterest LinkedIn Tumblr


ಲಖ್ನೋ: ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಳಿಕ ಕಾಂಗ್ರೆಸ್ ತನ್ನ ಮಿತ್ರಪಕ್ಷಗಳು, ಪ್ರಾದೇಶಿಕ ಮೈತ್ರಿ ಪಕ್ಷಗಳ ಮೇಲೆ ಸವಾರಿ ಮಾಡಲು ಹೊರಟಿದೆ ಎಂಬ ಆರೋಪದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮುಂದಿನ ಚುನಾವಣೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಮಾಜವಾದಿ ಪಾರ್ಟಿ ಮುಖಂಡ ಅಖೀಲೇಶ್ ಯಾದವ್ ಸುಳಿವು ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರಕಾರದಲ್ಲಿ ಎಸ್‌ಪಿ ಶಾಸಕನಿಗೆ ಮಾನ್ಯತೆ ನೀಡದೆ ಕಡೆಗಣಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಅಖಿಲೇಶ್ ಯಾದವ್, ಚುನಾವಣೆಗೆ ಸಹಕರಿಸಿದ್ದರೂ, ಕಾಂಗ್ರೆಸ್ ಅದನ್ನು ಪರಿಗಣಿಸಿಲ್ಲ. ಹೀಗಾಗಿ ಉತ್ತರಪ್ರದೇಶದಲ್ಲಿ ಮಹಾಘಟಬಂಧನದಲ್ಲಿ ಕಾಂಗ್ರೆಸ್‌ನ್ನು ದೂರವಿಡಬೇಕಾಗಬಹುದು ಎಂದು ಹೇಳಿದ್ದಾರೆ.

ಜತೆಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಈಗಾಗಲೇ ಪ್ರಾದೇಶಿಕ ಪಕ್ಷಗಳ ಪ್ರತ್ಯೇಕ ಒಕ್ಕೂಟ ರಚನೆಗೆ ಮುಂದಾಗಿದ್ದಾರೆ. ಅದೊಂದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದ್ದಾರೆ. ಅದು ಕಾಂಗ್ರೆಸ್ ಮತ್ತು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷೇತರ ಸಂಘಟನೆಯಾಗಿರಲಿದೆ ಎಂದು ಅಖಿಲೇಶ್ ಸುಳಿವು ನೀಡಿದ್ದಾರೆ.

ಇದೇ ರೀತಿ ರಾಜ್ಯದಲ್ಲೂ ಲೋಕಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ನಿಂದ ಪ್ರತ್ಯೇಕವಾಗಿ ಲೋಕಸಭೆಗೆ ಸ್ಪರ್ಧಿಸಲು ಜೆಡಿಎಸ್‌ ಚಿಂತನೆ ನಡೆಸಿದೆ ಎಂದು ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

Comments are closed.