ರಾಷ್ಟ್ರೀಯ

ಕಾಂಗ್ರೆಸ್ ಪಕ್ಷ ಒಂದು ರೀತಿ ಲಾಲಿಪಾಪ್ ಕಂಪನಿ ಇದ್ದಂತೆ, ಅದಕ್ಕೆ ದೇಶದ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ : ಪ್ರಧಾನಿ ಮೋದಿ ವಾಗ್ದಾಳಿ

Pinterest LinkedIn Tumblr

ಘಾಜಿಪುರ್: ಕಾಂಗ್ರೆಸ್ ಪಕ್ಷ ಒಂದು ರೀತಿ ಲಾಲಿಪಾಪ್ ಕಂಪನಿ ಇದ್ದಂತೆ. ಅದಕ್ಕೆ ದೇಶದ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಇಂದು ಉತ್ತರ ಪ್ರದೇಶದ ಘಾಜಿಪುರ್ ದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ನೀಡುವ ಸುಳ್ಳು ಭರವಸೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಹೇಳಿದರು.

ಕಾಂಗ್ರೆಸ್ ನವರು ಅಲ್ಪಾವಧಿ ಘೋಷಣೆ ಮತ್ತು ಭರವಸೆಗಳನ್ನು ನೀಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಇದರಿಂದ ಜನರಿಗೆ ಯಾವುದೇ ಸಹಾಯ ಆಗುವುದಿಲ್ಲ ಎಂದು ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ರೈತರ ಸಾಲ ಮನ್ನಾ ಮಾಡಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ತಾತ್ಕಾಲಿಕವಾಗಿ ಲಾಭವಾಗುವ ಯೋಜನೆಗಳಿಂದ ಜನರ ಸಮಸ್ಯೆ ಪರಿಹಾರವಾಗುವುದಿಲ್ಲ. ಕಾಂಗ್ರೆಸ್ ಈ ರೀತಿ ಘೋಷಣೆಗಳನ್ನು ಮಾಡುವ ಮೂಲಕ ಜನರನ್ನು ಮುರ್ಖರನ್ನಾಗಿ ಮಾಡುತ್ತಿದೆ ಎಂದು ಪ್ರಧಾನಿ ಆರೋಪಿಸಿದರು.

Comments are closed.