ರಾಷ್ಟ್ರೀಯ

ಪಾದದ ಮಸಾಜ್ ಮಾಡಿಸಿಕೊಳ್ಳಲು ಬಂದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಯುವಕ

Pinterest LinkedIn Tumblr

ಚಂಢೀಗಡ್: ಮಸಾಜ್ ಮಾಡಿಸಿಕೊಳ್ಳಲು ಬಂದಿದ್ದ 54 ವರ್ಷದ ವಿದೇಶಿ ಮಹಿಳೆಯನ್ನು ಯುವಕ ಅತ್ಯಾಚರಿಸಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

ಪಾದದ ಮಸಾಜ್ ಮಾಡಿಸಿಕೊಳ್ಳುವಾಗ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದ ಯುವಕ ತನ್ನ ಮೇಲೆ ಅತ್ಯಾಚಾರ ಮಾಡಿರುವುದಾಗಿ ಸಂತ್ರಸ್ತ ಮಹಿಳೆ ಡಿಸೆಂಬರ್ 27ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಸದ್ಯ ಆರೋಪ ತಲೆ ಮರೆಸಿಕೊಂಡಿದ್ದು ಆತ ಉತ್ತರ ಪ್ರದೇಶಧ ಬಿಜ್ನೋರ್ ನಿವಾಸಿ ಅಂತ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 19ರಂದು ವಿದೇಶಿ ಮಹಿಳೆ ತನ್ನ ಪಾಟ್ನರ್ ಜತೆ ಚಂಡೀಗಢಕ್ಕೆ ಬಂದಿದ್ದರು. ಬಳಿಕ ಚಂಡೀಗಢದ ಐಟಿ ಪಾರ್ಕ್ ನ ಸ್ಟಾರ್ ಹೊಟೇಲ್ ನಲ್ಲಿ ತಂಗಿದ್ದು ಅಲ್ಲಿನ ಸ್ಪಾದಲ್ಲಿ ಮಸಾಜ್ ಗೆಂದು ಹೋಗಿದ್ದಾಗ ಆರೋಪಿ ಅಸಭ್ಯವಾಗಿ ಮುಟ್ಟಿ, ನನ್ನ ಜೊತೆ ಕೆಟ್ಟದಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಭಾರತೀಯ ಸಂಪ್ರದಾಯಗಳನ್ನು ತಿಳಿದುಕೊಳ್ಳುವ ಸಲುವಾಗಿ ವಿದೇಶಿ ಮಹಿಳೆ ಚಂಡೀಗಢಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

Comments are closed.