ರಾಷ್ಟ್ರೀಯ

ಇಂದು ಮುಂಜಾನೆ ತೀವ್ರ ಪ್ರತಿಭಟನೆ ಹೊರತಾಗಿಯೂ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು!

Pinterest LinkedIn Tumblr

ಕೊಚ್ಚಿ: ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.

ಕೇರಳದ ಮಾಧ್ಯಮಗಳು ವರದಿ ಮಾಡಿರುವಂತೆ ಸುಮಾರು 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಇಂದು ಬೆಳಗ್ಗೆ ಸುಮಾರು 3.45ರ ವೇಳೆಯಲ್ಲಿ ಶಬರಿ ಗಿರಿಗೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ.

ಮಹಿಳೆಯರು ಅಯ್ಯಪ್ಪ ಸನ್ನಿದಾನಕ್ಕೆ ತೆರಳಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಸುಪ್ರೀಂ ಕೋರ್ಟ್ ಆದೇಶದ ಬಳಿಕ ಇದೇ ಮೊದಲ ಬಾರಿಗೆ ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶ ಮಾಡಿ ದೇವರ ದರ್ಶನ ಪಡೆದಿದ್ದಾರೆ.

18 ಮೆಟ್ಟಿಲ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸನ್ನಿಧಾನ ಏರಿದ ಮಹಿಳೆಯರು
ಇನ್ನು ಅಯ್ಯಪ್ಪನ ಭಕ್ತರು ಪೂಜ್ಯನೀಯ ಎಂದು ಭಾವಿಸುವ 18 ಮೆಟ್ಟಿಲುಗಳ ಬದಲಿಗೆ ಮಹಿಳೆಯರು ಸನ್ನಿಧಾನಕ್ಕೆ ತೆರಳಲು ಪರ್ಯಾಯ ಮಾರ್ಗದಲ್ಲಿ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲೂ ಕೂಡ ಮಹಿಳೆಯರು ಸನ್ನಿಧಾನಕ್ಕೆ ತೆರಳಲು ಯತ್ನಿಸಿದ್ದರಾದರೂ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ವಾಪಸ್ ಆಗಿದ್ದರು. ಇದೀಗ ಕೆಲ ವ್ಯಕ್ತಿಗಳ ಭದ್ರತೆಯೊಂದಿಗೆ ಮುಂಜಾನೆಯೇ ಸನ್ನಿಧಾನಕ್ಕೆ ತೆರಳಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.

ಆದಗೆ ಇಂದು ದರ್ಶನ ಪಡೆದ ಮಹಿಳೆಯರು 50 ವರ್ಷದೊಳಗಿನವರೇ ಎಂಬುದನ್ನು ದೇಗುಲದ ಆಡಳಿತ ಮಂಡಳಿ ಇನ್ನಷ್ಟೇ ಸ್ಪಷ್ಟಪಡಿಸಬೇಕಿದೆ.

Comments are closed.