ರಾಷ್ಟ್ರೀಯ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ: ಸಂಪುಟ ಸಭೆಯಲ್ಲಿ ನಿರ್ಣಯ

Pinterest LinkedIn Tumblr

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಜ.7 ರಂದು ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.

ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ. 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೋದಿ ಸರ್ಕಾರ ನಿರ್ಣಯ ಮಹತ್ವ ಪಡೆದುಕೊಂಡಿದ್ದು ಈ ನಡೆಯನ್ನು ಸಾಮಾನ್ಯವರ್ಗದ ಜನತೆಯ ಮತ ಗಳಿಸಲು ರೂಪಿಸಿರುವ ಮಾಸ್ಟ್ರರ್ ಸ್ಟ್ರೋಕ್ ಎಂದೇ ವಿಶ್ಲೇಷಿಸಲಾಗುತ್ತಿದೆ.

Comments are closed.