ರಾಷ್ಟ್ರೀಯ

ಅಯೋಧ್ಯೆ ವಿವಾದ: 5 ಮಂದಿ ನ್ಯಾಯಾಧೀಶರ ಪೀಠದಿಂದ ಜನವರಿ 10ರಂದು ವಿಚಾರಣೆ

Pinterest LinkedIn Tumblr


ನವದೆಹಲಿ: ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ನ್ಯಾಯಪೀಠವು 2018 ರ ಜನವರಿ 10 ರಂದು ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಎನ್.ವಿ.ರಮಣ, ಯು.ಯು.ಲಲಿತ್ ಮತ್ತು ಡಿ.ವೈ.ಚಂದ್ರಚೂದ್ ಅವರನ್ನೊಳಗೊಂಡ ಪೀಠ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ 14 ಅರ್ಜಿಗಳ ವಿಚಾರಣೆ ನಡೆಸಲಿದೆ.

2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸಾಕಷ್ಟು ಮೇಲ್ಮನವಿಗಳು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದವು.

ಈ ಮೊದಲು ಕಳೆದ ವರ್ಷ ಅಕ್ಟೋಬರ್‌ 29ರಂದು ಸುಪ್ರೀಂ ಕೋರ್ಟ್‌ ಅಯೋಧ್ಯೆ ಕೇಸನ್ನು ಸೂಕ್ತ ಪೀಠವು ಜನವರಿ ಮೊದಲ ವಾರದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಅದರಂತೆ ಜನವರಿ 4ರಂದು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತ್ತು.

Comments are closed.