
ನವದೆಹಲಿ: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಶೇ. 10 ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
ಸಂವಿಧಾನ ತಿದ್ದುಪಡಿ ಮಸೂದೆಗೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿತ್ತು. ನಂತರ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗಿತ್ತು. ಅದರಂತೆ [ಇಂದು] ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಸೂದೆಗೆ ಅಂಕಿತ ಹಾಕಿದ್ದಾರೆ.
ಚಳಿಗಾಲದ ಸಂಸತ್ ಅಧಿವೇಶನದ ವೇಳೆ ಪ್ರಧಾನಿ ಮೋದಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.10 ಮೀಸಲಾತಿಯ ಮಸೂದೆ ಕುರಿತ ನಿರ್ಣಯವನ್ನು ಕೈಗೊಂಡಿದ್ದರು.
ಈ ಮೀಸಲಾತಿಗೆ ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ಸೂಚಿಸಿದ್ದು, ಬಳಿಕ ರಾಜ್ಯಸಭೆಯಲ್ಲೂ ಈ ಮಸೂದೆ ಪಾಸ್ ಆಗಿತ್ತು.
Comments are closed.