ರಾಷ್ಟ್ರೀಯ

ಮಾರ್ಚ್ ನಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ!

Pinterest LinkedIn Tumblr


ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ರಾಜಕೀಯ ಪಕ್ಷಗಳು ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಿದ್ದು, ಚುನಾವಣೆ ಆಯೋಗ ಕೂಡ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮಾರ್ಚ್‌ ಮೊದಲ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ.

ಪ್ರಸಕ್ತ ಲೋಕಸಭೆಯ ಅವಧಿ ಜೂನ್‌ 3ರಂದು ಕೊನೆಗೊಳ್ಳಲಿದ್ದು, ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ಎರಡನೇ ವಾರದಲ್ಲಿ ಲೋಕಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ.

ಈ ಬಾರಿಯ ಲೋಕಸಭಾ ಚುನಾವಣೆಯ ಜೊತೆಗೆ ಜಮ್ಮು ಮತ್ತು ಕಾಶ್ಮೀರ, ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ಹಾಗೂ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಕೂಡ ನಡೆಸುವ ಸಾಧ್ಯತೆ ಇದೆ.

Comments are closed.