ರಾಷ್ಟ್ರೀಯ

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ನಿಲ್ಲಿಸಬೇಕು: ಅಸಾದುದ್ದೀನ್ ಓವೈಸಿ

Pinterest LinkedIn Tumblr

ಹೈದ್ರಾಬಾದ್‌: ಕಾಶ್ಮೀರ ವಿಚಾರದಲ್ಲಿ ಮೂಗು ತೂರಿಸುವುದನ್ನು ಪಾಕಿಸ್ತಾನ ಮೊದಲ ನಿಲ್ಲಿಸಬೇಕು ಎಂದು ಎಐಎಂಐಎ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಶನಿವಾರ ಹೇಳಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಓವೈಸಿ ಹೇಳಿದ್ದಾರೆ.

ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರಿಗಳು ಮತ್ತು ಅಲ್ಲಿನ ಯುವಕರು ಕೂಡಾ ಭಾರತೀಯರೇ. ಪಾಕ್‌ ಕಾಶ್ಮೀರದ ವಿಚಾರದಲ್ಲಿ ಖ್ಯಾತೆ ತೆಗೆದರೆ ಅದರ ಪರಿಣಾಮ ಕೆಟ್ಟದಾಗಿರುತ್ತದೆ ಎಂದು ಓವೈಸಿ ಎಚ್ಚರಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಸಂಬಂಧಿಸಿದಂತೆ ಯಾವುದೇ ನೀತಿ, ದೂರದೃಷ್ಟಿಯ ಯೋಜನೆ ಇಲ್ಲ ಎಂದರು.

Comments are closed.