ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಸ್ನೇಹಿತರ ಜತೆ ಸೇರಿ ಬಿಜೆಪಿ ಸರಕಾರ: ರಾಮ್ ಮಾಧವ್

Pinterest LinkedIn Tumblr


ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಸ್ಥಿರ ಸರಕಾರ ನೀಡಲಿದೆ ಎಂದು ಬಿಜೆಪಿ ನಾಯಕ ರಾಮ್ ಮಾಧವ್ ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಸರಕಾರ ನಡೆಸಿದ್ದ ಬಿಜೆಪಿ, ನಂತರ ರಾಜಕೀಯ ಅಸ್ಥಿರತೆ ಉಂಟಾದಾಗ ಸರಕಾರದಿಂದ ಹೊರಬಂದಿತ್ತು. ಪ್ರಸ್ತುತ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ನಡೆಸಲಾಗುತ್ತಿದೆ.

ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಆದರೆ ಜಮ್ಮು-ಕಾಶ್ಮೀರದಲ್ಲಿ ಅದೇ ಸಂದರ್ಭದಲ್ಲಿ ಚುನಾವಣೆ ನಡೆಯುವುದೇ ಅಥವಾ ಅದಕ್ಕೂ ನಂತರ ವಿಧಾನಸಭೆ ಚುನಾವಣೆ ನಡೆಯುವುದೇ ಎಂದು ಚುನಾವಣಾ ಆಯೋಗ ಇನ್ನಷ್ಟೇ ದಿನಾಂಕ ಪ್ರಕಟಿಸಬೇಕಿದೆ.

ಆದರೆ ಚುನಾವಣೆ ನಡೆದರೆ, ಬಿಜೆಪಿ ಈ ಬಾರಿ ಏಕಾಂಗಿಯಾಗಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ರಾಮ್ ಮಾಧವ್ ತಿಳಿಸಿದ್ದಾರೆ.

ಜತೆಗೆ ಚುನಾವಣೆ ಬಳಿಕ ಕೆಲವು ಗೆಳೆಯರ ಜತೆ ಸೇರಿ ಬಿಜೆಪಿ ಸರಕಾರ ರಚಿಸಲಿದೆ ಎಂದಿರುವ ರಾಮ್ ಮಾಧವ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಸಂಘಟಿಸಿ, ಚುನಾವಣೆ ಎದುರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜತೆಗೆ ಅವಧಿಗೂ ಮುನ್ನ ಚುನಾವಣೆಗೆ ಬಿಜೆಪಿ ಯತ್ನಿಸುತ್ತಿದೆ ಎನ್ನುವುದು ಸುಳ್ಳು ಎಂದು ರಾಮ್ ಮಾಧವ್ ಹೇಳಿದ್ದಾರೆ.

Comments are closed.