ರಾಷ್ಟ್ರೀಯ

ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆ: ಮಾಜಿ ಮುಖ್ಯಮಂತ್ರಿ ನಿವಾಸಕ್ಕೆ ಸಿಬಿಐ ದಾಳಿ

Pinterest LinkedIn Tumblr

ರೋಹ್ಟಕ್​, ಜನವರಿ 25: ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ನಿವಾಸದ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಬಿಐನ ಅಧಿಕಾರಿಗಳು ರೋಹ್ಟಕ್​ನಲ್ಲಿರುವ ಹೂಡಾ ಅವರ ನಿವಾಸ ಮತ್ತು ಕಚೇರಿ ಸೇರಿ ಸುಮಾರು 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.

ಗುರುಗ್ರಾಮದ ಭೂಮಿಗೆ ಸಂಬಂಧಿಸಿದ ಹಗರಣದಲ್ಲಿ ಅವರ ಮೇಲೆ ದಾಳಿ ನಡೆಸಲಾಗಿದೆ. ಸರ್ಕಾರಿ ಯೋಜನೆಗಾಗಿ ಗುರುಗ್ರಾಮದ 1,407 ಎಕರೆ ಭೂಸ್ವಾಧೀನ ಮಾಡಿಕೊಂಡಿದ್ದ ಶೇ.95 ಭೂಮಿಯನ್ನು ಹಿಂದಿರುಗಿಸಿದ ಹಗರಣದ ಕುರಿತು ತನಿಖೆ ನಡೆಸುವಂತೆ 2017ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

2009ರಲ್ಲಿ ಅಂದಿನ ಭೂಪಿಂದರ್​ ಸಿಂಗ್​ ಹೂಡಾ ಅವರ ನೇತೃತ್ವದ ಕಾಂಗ್ರೆಸ್​ ಸರ್ಕಾರ ಗುರುಗ್ರಾಮದ 1,407 ಎಕರೆ ಪ್ರದೇಶವನ್ನು ಸ್ವಾಧೀನ ಮಾಡಿಕೊಂಡಿತ್ತು. ಇನ್ನು ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ.

Comments are closed.