ರಾಷ್ಟ್ರೀಯ

ಸಂಸತ್ತು ಬಜೆಟ್ ಅಧಿವೇಶನ; ಎಲ್ಲಾ ರೀತಿಯ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧ: ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ಬಹು ನಿರೀಕ್ಷಿತ ಸಂಸತ್ತು ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಎಲ್ಲಾ ರೀತಿಯ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.

ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿಯವರು, ಸಂಸತ್ತಿನ ಕಾರ್ಯವೈಖರಿಯನ್ನು ಇಡೀ ದೇಶ ಗಮನಿಸುತ್ತಿದೆ. ಸಂಸದರು ಸಂಸತ್ತಿನಲ್ಲಿ ನಡೆಯುತ್ತಿರುವ ಅಧಿವೇಶನವನ್ನು ಅರ್ಥಪೂರ್ಣವಾಗುವಂತೆ ಮಾಡಬೇಕು. ಪ್ರತೀ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಆರಂಬವಾಗಲಿದ್ದು, ಜನಪ್ರಿಯ ಘೋಷಣೆಗಳು ಘೋಷಣೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಫೆ.13 ರಂದು ಈ ಅಧಿವೇಶನ ಕೊನೆಗೊಳ್ಳಲಿದೆ. ಚುನಾವಣೆಗೆ ಸಮಾಜದ ವಿವಿಧ ವರ್ಗದ ಜನರನ್ನು ಓಲೈಸುವ ನಿಟ್ಟಿನಿಂದ ಸರ್ಕಾರ ಹಲವಾರು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ.

Comments are closed.