ರಾಷ್ಟ್ರೀಯ

ಕೊನೆಗೂ ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಶಬರಿಮಲೆ ಆಡಳಿತ ಮಂಡಳಿ!

Pinterest LinkedIn Tumblr


ನವದೆಹಲಿ: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್​​ ನೀಡಿದ್ದ ತೀರ್ಪಿಗೆ ನಾವು ಬದ್ಧವಾಗಿದ್ದೇವೆ ಎಂದು ಅಯ್ಯಪ್ಪ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. ಜತೆಗೆ ಕೋರ್ಟ್​​ ಆದೇಶದಂತೆಯೇ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿ ತೀರ್ಪು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೋಗಾಯ್​​ ನೇತೃತ್ವದ ನ್ಯಾಯಪೀಠ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡುವುದಕ್ಕು; ಧಾರ್ಮಿಕ ಆಚರಣೆಗೆ ಯಾವುದೇ ಸಂಬಂಧವಿಲ್ಲ ಎಂದು ಚಾಟಿ ಬೀಸಿದೆ.

ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10-50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಬಾರದು. ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಈ ಹಿಂದೆ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕು. ಹಾಗೆಯೇ ಮಹಿಳೆಯರ ಪ್ರವೇಶ ನಿರಾಕರಿಸಬೇಕೆಂದು ಕೋರಿ ಸುಪ್ರೀಂಗೆ ಭಕ್ತರು ಅರ್ಜಿ ಸಲ್ಲಿಸಿದ್ದರು. ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ಭಕ್ತರಿಂದಲೇ 55 ರಿಂದ 65 ಮರುಪರಿಶೀಲನಾ ಅರ್ಜಿ ಸಲ್ಲಿಕೆಯಾಗಿದ್ದವು.

ಸದ್ಯ ಮುಖ್ಯ ನ್ಯಾಯಮೂರ್ತಿ ‘ರಂಜನ್​​ ಗೋಗಾಯ್​​’ರ ನೇತೃತ್ವದ ಪಂಚ ಸದಸ್ಯ ಪೀಠದಿಂದ ಇಂದು ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದೆ. ಇದೇ ವೇಳೆ ಮಹಿಳೆಯರ ಪ್ರವೇಶಕ್ಕೆ ಧಾರ್ಮಿಕ ನಂಬಿಕೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಮತ್ತೊಮ್ಮೆ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ದೇವಸ್ಥಾನ ಆಡಳಿತ ಮಂಡಳಿಯೂ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಿದೆ. ಇದಂರಿದಾಗಿ ಪ್ರವೇಶ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸುತ್ತಿರುವ ಭಕ್ತರು ಮತ್ತು ವಿವಿಧ ಸಂಘಟನೆಗಳಿಗೆ ಭಾರೀ ಹಿನ್ನಡೆಯಾಗಿದೆ.

ಈ ಹಿಂದೆಯೇ ದೇವಸ್ಥಾನದೊಳಗೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶ ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಸೆ.28ರಂದು ತೀರ್ಪು ನೀಡಿತ್ತು. ಅದನ್ನು ವಿರೋಧಿಸಿ ಇಲ್ಲಿಯವರೆಗೂ 65 ಅರ್ಜಿಗಳು ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಕೆಯಾಗಿದ್ದವು. ಈ ಎಲ್ಲ ಅರ್ಜಿಗಳನ್ನೂ ವಿಚಾರಣೆಗೆ ಒಳಪಡಿಸಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಒಪ್ಪಿಗೆ ಸೂಚಿಸಿತ್ತು.

ಇನ್ನು ಅರ್ಜಿಗಳ ವಿಚಾರಣೆ ಜನವರಿ 22ರಂದು ನಡೆಯಲಿದೆ ಹೇಳಿತ್ತು. ಬಳಿಕ ಅಂದೇ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್​​ ಗೋಗಾಯ್ ನೇತೃತ್ವದ ನ್ಯಾಯಪೀಠ​​ ಮತ್ತೆ ಫೆಬ್ರವರಿ 6ಕ್ಕೆ ಪ್ರಕರಣ ಮುಂದೂಡಿತ್ತು. ಜತೆಗೆ ತೆರೆದ ಕೋರ್ಟ್‌ನಲ್ಲಿ ವಿಚಾರಣೆ ನಡೆಯಬೇಕು ಎಂದು ಸಲ್ಲಿಕೆಯಾದ ಅರ್ಜಿಯನ್ನು ನ್ಯಾಯಪೀಠ ತಿರಸ್ಕರಿಸಿತು.

ತನ್ನ ಹಿಂದಿನ ತೀರ್ಪನ್ನು ಮತ್ತೆ ಪರಿಶೀಲನೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದರೂ, ದೇವಸ್ಥಾನದ ಆಡಳಿತ ಮಂಡಳಿ ಮಹಿಳೆಯರಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಮುಂದಿನ ತೀರ್ಪು ಬರುವವರೆಗೂ ಸುಪ್ರೀಂಕೋರ್ಟ್‌ನ ಹಿಂದಿನ ತೀರ್ಪು ಚಾಲ್ತಿಯಲ್ಲಿ ಇರುತ್ತದೆ.

ಕೇರಳ ಸರ್ಕಾರ ಇದುವರೆಗೂ 50 ವರ್ಷದೊಳಗಿನ 51 ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದಾರೆ ಎಂದು ಸುಪ್ರೀಂಕೋರ್ಟ್​ಗೆ ವರದಿ ಸಲ್ಲಿಸಿತ್ತು. ಅದೇ ಸರ್ಕಾರ ಇದೀಗ ಮತ್ತೊಂದು ಸ್ಪಷ್ಟೀಕರಣ ನೀಡಿದ್ದು, 51 ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಿಲ್ಲ. 50ರೊಳಗಿನ ಕೇವಲ ಇಬ್ಬರು ಮಹಿಳೆಯರು ಮಾತ್ರ ಇದುವರೆಗೂ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದಾರೆ ಎಂದು ವರದಿ ನೀಡಿದೆ ಎನ್ನಲಾಗಿದೆ. ಹಾಗೆಯೇ ಸುಳ್ಳು ವರದಿ ನೀಡಿದ್ದ ಕೇರಳ ಸರ್ಕಾರಕ್ಕೆ ಇದರಿಂದ ಮುಜುಗರ ಉಂಟಾಗಿದೆ.

Comments are closed.