ರಾಷ್ಟ್ರೀಯ

10 ಮಂದಿಯಿಂದ ಯುವತಿಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ!

Pinterest LinkedIn Tumblr


ಯುವತಿ ವ್ಯಕ್ತಿಯೊಂದಿಗೆ ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಇಸ್ಸಾವಾಲ್​ ಎಂಬ ಹಳ್ಳಿಯ ಬಳಿ ಮೂರು ಬೈಕುಗಳಲ್ಲಿ ಪುಂಡರು ಅಡ್ಡಗಟ್ಟಿದ್ದಾರೆ. ನಂತರ ಕಾರಿನಲ್ಲಿದ್ದ ವ್ಯಕ್ತಿಯನ್ನು ಕಲ್ಲು ಮತ್ತು ಇಟ್ಟಿಗೆಗಳಿಂದ ಚೆನ್ನಾಗಿ ಥಳಿಸಿದ್ದಾರೆ. ನಂತರ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಲಾಗಿದೆ

ಲೂದಿಯಾದ: 21 ವರ್ಷದ ಯುವತಿಯನ್ನು ಕಾರಿನಿಂದ ಹೊರಗೆ ಎಳೆದು ಸುಮಾರು ಹತ್ತು ಮಂದಿ ಪುರುಷರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ಪಂಜಾಬ್​ನ ಲೂದಿಯಾನ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುವತಿ ವ್ಯಕ್ತಿಯೊಂದಿಗೆ ಶನಿವಾರ ರಾತ್ರಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಇಸ್ಸಾವಾಲ್​ ಎಂಬ ಹಳ್ಳಿಯ ಬಳಿ ಮೂರು ಬೈಕುಗಳಲ್ಲಿ ಪುಂಡರು ಅಡ್ಡಗಟ್ಟಿದ್ದಾರೆ. ನಂತರ ಕಾರಿನಲ್ಲಿದ್ದ ವ್ಯಕ್ತಿಯನ್ನು ಕಲ್ಲು ಮತ್ತು ಇಟ್ಟಿಗೆಗಳಿಂದ ಚೆನ್ನಾಗಿ ಥಳಿಸಿದ್ದಾರೆ. ನಂತರ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತರುಣ್ ರತನ್​ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ.

Comments are closed.