ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಪುಲ್ವಾಮಾದ ಶಾಲೆಯಲ್ಲಿ ಸ್ಫೋಟ, ಹಲವು ಮಕ್ಕಳಿಗೆ ಗಾಯ!

Pinterest LinkedIn Tumblr


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಶಾಲಾ ಆವರಣದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಪುಲ್ವಾಮಾದಲ್ಲಿನ ಖಾಸಗಿ ಶಾಲೆಯಲ್ಲಿ ಸ್ಫೋಟದಿಂದ 10 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು, ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹತ್ಯೆಗೈದ ಬಳಿಕ ಈ ಘಟನೆ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್ ನಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಮಂಗಳವಾರ ಪುಲ್ವಾಮಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಎಂಬ ಉಗ್ರವಾದಿ ಎನ್ಕೌಂಟರ್ ನಲ್ಲಿ ಮೃತಪಟ್ಟಿದ್ದರು.

Comments are closed.