ರಾಷ್ಟ್ರೀಯ

ಭಯೋತ್ಪಾದಕರ ದಾಳಿ: ಪ್ರಧಾನಿ ಮೋದಿ ಹೇಳಿದ್ದೇನು?

Pinterest LinkedIn Tumblr

ಶ್ರೀನಗರ: ಉರಿ ಸೇನಾ ನೆಲೆ ಮೇಲೆ ನಡೆದ ದಾಳಿಯ ಬಳಿಕ ಕಣಿವೆಯಲ್ಲಿ ಉಗ್ರರು ಮತ್ತೊಂದು ದೊಡ್ಡ ದಾಳಿ ನಡೆಸಿದ್ದು, ಸಿಆರ್ ಪಿಎಫ್ ಯೋಧರ ವಾಹನದ ಮೇಲೆ IED ಸ್ಫೋಟಿಸಿದ್ದಾರೆ.

ಉಗ್ರರ ಈ ಪೈಶಾಚಿಕ ಕೃತ್ಯಕ್ಕೆ 26 ಯೋಧರು ಹುತಾತ್ಮರಾಗಿದ್ದಾರೆ. ಯೋಧರ ಮೇಲೆ ದೌರ್ಜನ್ಯವೆಸಗಿದ ಉಗ್ರರ ಕೃತ್ಯಕ್ಕೆ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ.

‘ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ. ಉಗ್ರರ ಈ ದಾಳಿ ಅತ್ಯಂತ ಹೀನ, ಘನಘೋರ ಕೃತ್ಯ. ಇಡೀ ದೇಶ ಹುತಾತ್ಮ ಯೋಧರ ಕುಟುಂಬಗಳಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ’ ಎಂದು ಮೋದಿ ಗುಡುಗಿದ್ದಾರೆ.

ಉಗ್ರರ ದಾಳಿಗೆ ಅರುಣ್ ಜೇಟ್ಲಿ ಖಂಡನೆ ವ್ಯಕ್ತಪಡಿಸಿದ್ದು, ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ. ಉಗ್ರರಿಗೆ ಮರೆಯಲಾಗದ ಪಾಠ ಕಲಿಸುತ್ತೇವೆ ಎಂದು ಟ್ವಿಟ್ಟರ್ ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಎಚ್ಚರಿಕೆ ನೀಡಿದ್ದಾರೆ.

‘ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ಕೃತ್ಯ ಖಂಡನೆ. ಯೋಧರು ಹುತಾತ್ಮರಾದ ನೋವು ಹೇಳಿಕೊಳ್ಳಲು ಪದಗಳೇ ಇಲ್ಲ. ಹುತಾತ್ಮ ಯೋಧರ ಕುಟುಂಬಕ್ಕೆ ನನ್ನ ಸಂತಾಪ ಇದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Comments are closed.