ರಾಷ್ಟ್ರೀಯ

ಪ್ರತ್ಯೇಕತವಾದಿ ಮೊಹಮ್ಮದ್ ಯಾಸೀನ್ ಮಲಿಕ್ ಸೇರಿ 12 ಮಂದಿ ಬಂಧನ

Pinterest LinkedIn Tumblr

ಶ್ರೀನಗರ: ಪುಲ್ವಾಮಾ ಭೀಕರ ಉಗ್ರ ದಾಳಿ ಬಳಿಕ ಪ್ರತ್ಯೇಕತವಾದಿಗಳಿಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕೆಎಲ್ಎಫ್) ಮುಖ್ಯಸ್ಥ ಮೊಹಮ್ಮದ್ ಯಾಸೀನ್ ಮಲಿಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಜೆಕೆಎಲ್ಎಫ್ ಮುಖ್ಯಸ್ಥ ಯಾಸೀನ್ ಮಲಿಕ್ ಮತ್ತು ಜಮಾತ್ ಇ ಇಸ್ಲಾಂ ಮುಖಂಡ ಅಬ್ದುಲ್ ಹಮೀದ್ ಫಯಾಜ್ ಸೇರಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ರಾತ್ರಿ ಯಾಸೀನ್ ಮಲಿಕ್ ಅವರ ಮನೆಗೆ ಭೇಟಿ ನೀಡಿದ ಪೊಲೀಸರು ಮುನ್ನೆಚ್ಚರಿಕೆಯ ಕ್ರಮವಾಗಿ ಮೊಹಮ್ಮದ್ ಯಾಸೀನ್ ಮಲಿಕ್ ರನ್ನು ಬಂಧಿಸಿದ್ದಾರೆ ಎಂದು ಜೆಕೆಎಲ್ಎಫ್ ವಕ್ತಾರ ಹೇಳಿದ್ದಾರೆ.

ಯಾಸೀನ್ ಮಲಿಕ್ ಬಂಧನ ಕುರಿತಂತೆ ಯಾವುದೇ ಕಾರಣ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕೋತಿಭಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ವಕ್ತಾರರು ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ಭಾರತೀಯ ಸೇನೆ ಮೇಲಿನ ಆತ್ಮಾಹುತಿ ಬಾಂಬ್ ದಾಳಿ ಬಳಿಕ ಕೇಂದ್ರ ಸರ್ಕಾರ ಪ್ರತ್ಯೇಕತವಾದಿಗಳ ಭದ್ರತೆಯನ್ನು ಹಿಂಪಡೆದಿತ್ತು. ಇದೀಗ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಅವರನ್ನು ಬಂಧಿಸಲಾಗಿದೆ.

Comments are closed.