ರಾಷ್ಟ್ರೀಯ

ಭಯೋತ್ಪಾದನೆ ವಿರುದ್ಧ ನಮ್ಮ ಹೋರಾಟ, ಕಾಶ್ಮೀರಿಗಳ ವಿರುದ್ಧ ಅಲ್ಲ, ಕಾಶ್ನೀರಿ ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ನಿಲ್ಲಿಸಿ: ಪ್ರಧಾನಿ ಮೋದಿ

Pinterest LinkedIn Tumblr

ಟೊಂಕ್ : ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಯೋತ್ಪಾದನೆ ನಿರ್ಮೂಲನೆ ನಿಟ್ಟಿನಲ್ಲಿ ತೀವ್ರ ಹೋರಾಟ ನಡೆಸಬೇಕಾಗಿದೆ. ಆದರೆ, ಕಾಶ್ನೀರಿ ವಿದ್ಯಾರ್ಥಿಗಳ ಮೇಲಿನ ದಾಳಿಯನ್ನು ನಿಲ್ಲಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಶ್ಮೀರಿಗಳ ವಿರುದ್ಧ ನಾವು ಹೋರಾಟ ಮಾಡಲ್ಲ, ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವುದಾಗಿ ರಾಜಸ್ತಾನದ ಟೊಂಕ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನರೇಂದ್ರ ಮೋದಿ ಹೇಳಿದರು.

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆಗಳು ನಡೆಯಬಾರದು, ಮನುಷ್ಯತ್ವದ ಮೇಲಿನ ಶತ್ರುಗಳ ಬಗ್ಗೆ ಹೋರಾಟ ನಡೆಸಬೇಕಾಗಿದೆ ಎಂದರು.

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅಧಿಕಾರ ಸ್ವೀಕರಿಸಿದಾಗ ಅವರನ್ನು ಅಭಿನಂದಿಸಿ , ಬಡತನ ಹಾಗೂ ಅನಕ್ಷರತೆ ವಿರುದ್ಧ ಜೊತೆಯಾಗಿ ಹೋರಾಟ ಮಾಡೋಣ ಎಂದಿದ್ದೆ.

ಇದಕ್ಕೆ ಬದ್ಧನಾಗಿರುವುದಾಗಿ ಹೇಳಿದ ಇಮ್ರಾನ್ ಖಾನ್ ಪಠಣ್ ಪುತ್ರ ಎಂದು ಹೇಳಿದ್ದರು. ಆದರೆ, ಅವರು ತಮ್ಮ ಮಾತಿಗೆ ಬದ್ಧರಾಗಿದ್ದಾರೆಯೇ ಎಂಬುದನ್ನು ಇಂದು ಪ್ರಶ್ನಿಸುವಂತಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.

Comments are closed.