ರಾಷ್ಟ್ರೀಯ

ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಲು ಶ್ರಮಿಸಿದ ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನ ಮಾಡಿದ ಪ್ರಧಾನಿ ಮೋದಿ!

Pinterest LinkedIn Tumblr

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಕುಂಭ, ಸ್ವಚ್ಛ ಆಭಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ವೇದಿಕೆಗೆ ಬರುವುದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಲು ಶ್ರಮಿಸಿದ ಸಫಾಯಿ ಕರ್ಮಚಾರಿಗಳ ಪಾದ ತೊಳೆದು ಸನ್ಮಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಸಫಾಯಿ ಕರ್ಮಚಾರಿ, ಸ್ವಚ್ಛಾಗ್ರಹಿಗಳು ಪೊಲೀಸ್ ಸಿಬ್ಬಂದಿಗಳು, ನಾವಿಕರಿಗೆ ಸ್ವಚ್ಛ ಕುಂಭ ಸ್ವಚ್ಛ ಆಭಾರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Comments are closed.