ರಾಷ್ಟ್ರೀಯ

ಪಾಕ್ ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ, ಕಾರ್ಯಾಚರಣೆ ವೇಳೆ ನಮ್ಮ ಮಿಗ್ -21 ವಿಮಾನ ಪತನವಾಗಿದ್ದು, ಓರ್ವ ಪೈಲಟ್ ನಾಪತ್ತೆ: ಎಂಇಎ

Pinterest LinkedIn Tumblr

ನವದೆಹಲಿ: ಪಾಕಿಸ್ತಾನದ ವೈಮಾನಿಕ ದಾಳಿಯನ್ನು ಭಾರತ ವಿಫಲಗೊಳಿಸಿದೆ. ಭಾರತದ ಗಡಿ ಉಲ್ಲಂಘಿಸಿದ್ದ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ ಎಂದು ಬುಧವಾರ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.

ಉಭಯ ದೇಶಗಳ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು, ಭಾರತದ ವಾಯು ಗಡಿ ಉಲ್ಲಂಘಿಸಿದ ಪಾಕ್ ನ ಒಂದು ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದೇವೆ. ಕಾರ್ಯಾಚರಣೆ ವೇಳೆ ನಮ್ಮ ಮಿಗ್ -21 ವಿಮಾನ ಪತನವಾಗಿದ್ದು, ಓರ್ವ ಪೈಲಟ್ ನಾಪತ್ತೆಯಾಗಿದ್ದಾರೆ. ಆ ಪೈಲಟ್ ನಮ್ಮ ವಶದಲ್ಲಿದ್ದಾರೆ ಎಂದು ಪಾಕ್ ಹೇಳಿದೆ. ಆದರೆ ಈ ಬಗ್ಗೆ ಪರಿಶೀಲಿಸಬೇಕಿದೆ ಎಂದರು.

ಪಾಕಿಸ್ತಾನ ಇಂದು ನಮ್ಮನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಅದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಜೈಶ್ -ಇ- ಮೊಹಮದ್ ಉಗ್ರ ಸಂಘಟನೆ ನೆಲೆಗಳ ಮೇಲೆ ವೈಮಾನಿಕ ದಾಳಿ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಪಾಕ್ ವಾಯುಪಡೆ ಭಾರತದ ಗಡಿ ಉಲ್ಲಂಘಿಸಿದ್ದು, ಭಾರತೀಯ ವಾಯುಪಡೆ ಗಸ್ತು ವಿಮಾನಗಳು ಹಿಮ್ಮೆಟ್ಟಿಸಿವೆ ಎಂದು ಅವರು ಹೇಳಿದರು.

Comments are closed.