ಅಂತರಾಷ್ಟ್ರೀಯ

ಪಾಕ್-ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆ ಸ್ಥಗಿತ

Pinterest LinkedIn Tumblr


ಲಾಹೋರ್: ಪಾಕಿಸ್ತಾನ ಮತ್ತು ಭಾರತ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪಾಕ್ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ಗುರುವಾರ ಹೇಳಿದೆ. ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಳಿಕ ಎರಡೂ ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಪ್ರತಿ ಸೋಮವಾರ ಮತ್ತು ಗುರುವಾರ ಲಾಹೋರ್ ನಿಂದ 16 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಮುಂದಿನ ಆದೇಶದವರೆಗೆ ಅಮಾನತುಗೊಳಿಸಿರುವುದಾಗಿ ಪಾಕ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು DawnNewsTV ವರದಿ ಮಾಡಿದೆ.

ಗಡಿಯಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿರುವುದರಿಂದ ಇಂದು ಬೆಳಗ್ಗೆ ಪಾಕಿಸ್ತಾನದ ಲಾಹೋರ್ ನಿಂದ ಹೊರಡಬೇಕಿದ್ದ ಸಂಜೋತಾ ಎಕ್ಸ್ ಪ್ರೆಸ್ ರೈಲನ್ನು ಪಾಕಿಸ್ತಾನ ರದ್ದುಗೊಳಿಸಿದೆ. 1971ರ ಶಿಮ್ಲಾ ಒಪ್ಪಂದದಡಿ 1976 ಜುಲೈ 22 ರಂದು ಸಂಜೋತಾ ರೈಲು ಸೇವೆ ಆರಂಭಗೊಂಡಿತ್ತು.

Comments are closed.