ರಾಷ್ಟ್ರೀಯ

ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಮನೋಹರ್ ಪರಿಕ್ಕರ್

Pinterest LinkedIn Tumblr

ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯದಲ್ಲಿ ಮತ್ತೆ ಅಲ್ಪ ವ್ಯತ್ಯಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದ.

ಮೂಲಗಳ ಪ್ರಕಾರ ಪರಿಕ್ಕರ್ ಅವರನ್ನು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಕ್ಕರ್ ಅವರು ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಾಗಿರುವ ಪರಿಕ್ಕರ್ ಅವರನ್ನು ಇಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಸಂಜೆ ವೇಳೆಗೆ ಆಸ್ಪತ್ರೆ ವೈದ್ಯರು ಪರಿಕ್ಕರ್ ಅವರ ಆರೋಗ್ಯದ ಕುರಿತು ಹೇಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಕಳೆದ 2018ರ ಫೆಬ್ರವರಿಯಲ್ಲಿ ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವುದು ಬಹಿರಂಗವಾಗಿತ್ತು. ಆರಂಭದಲ್ಲಿ ಗೋವಾ, ದೆಹಲಿ ಮತ್ತು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಿಕ್ಕರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನ್ಯೂಯಾರ್ಕ್ ರವಾನೆ ಮಾಡಲಾಗಿತ್ತು.

Comments are closed.