ರಾಷ್ಟ್ರೀಯ

ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಕೈ ಹಿಡಿದ ಬಿಜೆಪಿ ಸಂಸದೆ!

Pinterest LinkedIn Tumblr


ಲಕ್ನೋ: ಲೋಕಸಭೆ ಚುನಾವಣೆಗೂ ಮೊದಲು ಬಿಜೆಪಿಗೆ ಸಂಸದೆಯೊಬ್ಬರು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಶನಿವಾರದಂದು ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಪುಲೆ ಕಾಂಗ್ರೆಸ್ ಕೈ ಹಿಡಿದಿದ್ದು, ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ದಲಿತ ನಾಯಕಿಯಾಗಿ ಗುರುತಿಸಿಕೊಂಡಿರುವ ಸಾವಿತ್ರಿ ಬಾಯಿ ಪುಲೆ ಸುಮಾರು ಒಂದು ವರ್ಷದಿಂದ ಬಿಜೆಪಿ ವಿರುದ್ಧ ಧ್ವನಿ ಎತ್ತಿರುವ ಈ ನಾಯಕಿ ಬಿಜೆಪಿಯನ್ನು ‘ದಲಿತ ವಿರೋಧಿ ಪಕ್ಷ’ ಎಂದೂ ಘೋಷಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಪಡೆದಿದ್ದ ಸಾವಿತ್ರಿ ಬಹರಾಯಿಚ್ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಕಳೆದ ವರ್ಷ ಡಿಸೆಂಬರ್ ನಲ್ಲಿ ಕಮಲ ಪಕ್ಷದ ವಿರುದ್ಧ ಧ್ವನಿ ಎತ್ತಿದ್ದ ಸಾವಿತ್ರಿ ‘ಬಿಜೆಪಿ ತನ್ನನ್ನು ನಿರ್ಲಕ್ಷಿಸುತ್ತಿದೆ, ಇದು ಸಮಾಜವನ್ನು ಒಡೆದು ರಾಜಕಾರಣ ನಡೆಸುತ್ತಿದೆ’ ಎಂದು ಆರೋಪಿಸಿದ್ದರು.

ಪುಲೆ ಜೊತೆಗೆ ಸಮಾಜವಾದಿ ಪಾರ್ಟಿಯ ನಾಯಕ ಹಾಗೂ ಫತೇಪುರ್ ಕ್ಷೇತ್ರದ ಮಾಜಿ ಸಂಸದ ರಾಕೇಶ್ ಸಚಾನ್ ಕೂಡಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿರುವ ಕಾಂಗ್ರೆಸ್ ಗೆ ಈ ಇಬ್ಬರು ನಾಯಕರ ಸೇರ್ಪಡೆ ಬಹಳಷ್ಟು ಶಕ್ತಿ ನೀಡಿದೆ ಎನ್ನಲಾಗುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಉತ್ತರ ಪ್ರದೇಶದಲ್ಲಿ ಹಿಂದೆ ಬಿದ್ದಿದ್ದ ಕಾಂಗ್ರೆಸ್, ಈ ಇಬ್ಬರು ನಾಯಕರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಮತ್ತೆ ಉತ್ತರ ಪ್ರದೆಶ ರಾಜ್ಯ ರಾಜಕಾರಣದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯತ್ನಿಸುತ್ತಿದೆ ಎಂಬುವುದು ಸ್ಪಷ್ಟವಾಗಿದೆ.

Comments are closed.