ರಾಷ್ಟ್ರೀಯ

ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆರುಳಿಸಿದ ಸೇನೆ

Pinterest LinkedIn Tumblr

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ ಉಗ್ರರ ಹೆಡೆ ಮುರಿಕಟ್ಟಲು ಸೇನೆ ಮುಂದಾಗಿದ್ದು, ತ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ಪುಲ್ವಾಮ ಜಿಲ್ಲೆಯ ತ್ರಾಲ್ ನ ರೇಶಿ ಮೊಹಲ್ಲಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನಾಪಡೆಗಳೂ ಕೂಡಲೇ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಸೈನಿಕರನ್ನು ನೋಡುತ್ತಿದ್ದಂತೆಯೇ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತನಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಕಟ್ಟಡವನ್ನು ಸುತ್ತುವರೆದಿರುವ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸೇನಾ ಮೂಲಗಳ ಪ್ರಕಾರ ಕಟ್ಟಡದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದೆ ಮೂರರಿಂದ ನಾಲ್ಕು ಉಗ್ರರು ಅವಿತಿರುವ ಶಂಕೆ ಇದೆ ಎನ್ನಲಾಗಿದೆ. ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಸೈನಿಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Comments are closed.