ರಾಷ್ಟ್ರೀಯ

ಅಂಬಾನಿ ಪುತ್ರ ಆಕಾಶ್ -ಶ್ಲೋಕಾರ ವೈಭವೋಪೇತ ವಿವಾಹ: ದೇಶ ವಿದೇಶಗಳ ಗಣ್ಯರ ದಂಡು

Pinterest LinkedIn Tumblr

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ ಮಾಲೀಕ ಮುಖೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ , ವಜ್ರ ವ್ಯಾಪಾರಿ ರಸೆಲ್ ಮೆಹ್ತಾ ಪುತ್ರಿ ಶ್ಲೋಕಾ ಮೆಹ್ತಾ ಅವರ ವೈಭವೋಪೇತ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ.

ದೇಶದ ನಂಬರ್ 1 ಶ್ರೀಮಂತ ಮುಖೇಶ್ ಅಂಬಾನಿ ಅವರ ನೂತನ ಕಟ್ಟಡ ಬಾಂದ್ರಾ ಕುರ್ಲಾ ಸಂಕೀರ್ಣದಲ್ಲಿ ಮೂರು ದಿನಗಳ ಕಾಲ ಅದ್ದೂರಿ ವಿವಾಹ ಕಾರ್ಯಕ್ರಮ ನಡೆಯುತ್ತಿದ್ದು, ನಾಳೆ ಮಂಗಳ ಪರ್ವ, ನಾಡಿದ್ದು, ಅರತಕ್ಷತೆಯನ್ನು ಏರ್ಪಡಿಸಲಾಗಿದೆ.

ಆಕಾಶ್ ತಾಯಿ ನಿತಾ, ಬಾಲಿವುಡ್ ನಟರಾದ ಶಾರುಖ್ ಖಾನ್, ರಣಬೀರ್ ಕಪೂರ್, ಕಾಂಗ್ರೆಸ್ ರಾಜೀವ್ ಶುಕ್ಲಾ ಮತ್ತಿತರು ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಕುಣಿದು ಕುಪ್ಪಳಿಸಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಗೂಗಲ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಸುಂದರ್ ಪಿಚ್ಚೈ, ಹಿರಿಯ ಉದ್ಯಮಿ ರತನ್ ಟಾಟಾ , ಎನ್. ಚಂದ್ರಶೇಖರನ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಹಾಗೂ ಅವರ ಪತ್ನಿ ಚೇರಿ, ವಿಶ್ವ ಸಂಸ್ಥೆ ಮಾಜಿ ಕಾರ್ಯದರ್ಶಿ ಬಾನ್ ಕಿ ಬೂನ್ ಮತ್ತಿತರ ದೇಶ – ವಿದೇಶಗಳ ಗಣ್ಯರು ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸೂಪರ್ ಸ್ಟಾರ್ ರಜನಿಕಾಂತ್, ಅಮೀರ್ ಖಾನ್, ಪ್ರಿಯಾಂಕಾ ಚೋಪ್ರಾ, ಐಶ್ವರ್ಯ ರೈ ಬಚ್ಚನ್, ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯಾ ಭಾಗವಹಿಸಿದ್ದರು.

ವಿವಾಹ ಕಾರ್ಯಕ್ರಮಕ್ಕಾಗಿ ತರಹೇವಾರಿ ಖಾದ್ಯಗಳನ್ನು ತಯಾರಿಸಲಾಗಿತ್ತು.150 ಭಾರತೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರಿಂದ ಪ್ರದರ್ಶನ ಆಯೋಜಿಸಲಾಗಿತ್ತು ಎಂದು ತಿಳಿದುಬಂದಿದೆ.

Comments are closed.