ರಾಷ್ಟ್ರೀಯ

ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ: ಏಪ್ರಿಲ್ 11ಕ್ಕೆ ಮೊದಲ ಹಂತದ ಚುನಾವಣೆ; ಮೇ 23 ಕ್ಕೆ ಫಲಿತಾಂಶ, 7 ಹಂತಗಳಲ್ಲಿ ಚುನಾವಣೆ

Pinterest LinkedIn Tumblr

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, 7 ಹಂತಗಳಲ್ಲಿ ನಡೆಯಲಿದೆ.

ಏಪ್ರಿಲ್ 11ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮೇ 23ರಂದು ಮತಗಳ ಎಣಿಕೆ ನಡೆಯಲಿದೆ. ಎರಡನೇ ಹಂತದ ಚುನಾವಣೆ ಏಪ್ರಿಲ್‌ 18ರಂದು ನಡೆಯಲಿದೆ.

3ನೇ ಹಂತದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. 4ನೇ ಹಂತ 29 ಏಪ್ರಿಲ್, 5ನೇ ಹಂತ ಮೇ6ರಂದು, ಮೇ 12ಕ್ಕೆ 6ನೇ ಹಂತ, 7ನೇ ಹಂತದ ಚುನಾವಣೆ ಮೇ 19ರಂದು ನಡೆಯಲಿದೆ.

ಮೊದಲ ಹಂತದಲ್ಲಿ 20 ರಾಜ್ಯಗಳ 91 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮುಖ್ಯ ಚುನಾವಣೆ ಆಯುಕ್ತ ಸುನಿಲ್ ಅರೋರಾ ದಿಲ್ಲಿಯ ವಿಜ್ಞಾನ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಾರ್ವತ್ರಿಕ ಚುನಾವಣೆ 2019ರ ವೇಳಾಪಟ್ಟಿ ಪ್ರಕಟಿಸಿದರು.

ಮುಖ್ಯ ಚುನಾವಣೆ ಆಯುಕ್ತ ಸುನಿಲ್ ಅರೋರಾ ಅವರ ಸುದ್ದಿಗೋಷ್ಠಿಯ ಮುಖ್ಯಾಂಶಗಳು:

 • ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಸಮಗ್ರ ಚರ್ಚೆ ನಡೆಸಿದ ಬಳಿಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
 • ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
 • ಮತದಾರರ ಪಟ್ಟಿಗಳನ್ನು ಸಮಗ್ರವಾಗಿ ಪರಿಷ್ಕರಿಸಲಾಗುತ್ತಿದ್ದು ನಾಮಪತ್ರ ಸಲ್ಲಿಕೆಯ ಕೊನೆಯ ದಿನದ ವರೆಗೂ ಈ ಪ್ರಕ್ರಿಯೆ ಮುಂದುವರಿಯಲಿದೆ.
 • 18-19 ವರ್ಷ ವಯಸ್ಸಿನ 1.5 ಕೋಟಿ ಮತದಾರರಿದ್ದಾರೆ. 99.6 ಶೇ ಮತದಾರರು ಗುರುತಿನ ಚೀಟಿ (ಎಪಿಕ್ ಕಾರ್ಡ್‌) ಹೊಂದಿದ್ದಾರೆ.
 • ಸುಮಾರು 90 ಕೋಟಿ ಮತದಾರರು 2019ರ ಚುನಾವಣೆಯಲ್ಲಿ ಹಕ್ಕು ಚಲಾಯಿಸಲಿದ್ದಾರೆ: ಸಿಇಸಿ.
 • ಫೋಟೋ ಸಹಿತ ಮತದಾರರ ಚೀಟಿಯನ್ನು ಮಾರ್ಗದರ್ಶನಕ್ಕಾಗಿ ಮಾತ್ರ ಬಳಸಬಹುದೆ ಹೊರತು ಮತಗಟ್ಟೆಯಲ್ಲಿ ಗುರುತಿನ ಚೀಟಿಯಾಗಿ ಬಳಸುವಂತಿಲ್ಲ: ಸಿಇಸಿ
 • ಈ ಬಾರಿ ಎಲ್ಲ ಮತಗಟ್ಟೆಗಳಲ್ಲೂ ವಿವಿಪ್ಯಾಟ್‌ ಯಂತ್ರಗಳನ್ನು ಬಳಸಲಾಗುತ್ತಿದ್ದು, ಸೂಕ್ತ ಭದ್ರತಾ ವ್ಯವಸ್ಥೆ ಏರ್ಪಡಿಸಲಾಗುತ್ತದೆ.
 • ದೇಶಾದ್ಯಂತ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ. ಯಾವುದೇ ರೀತಿಯ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಸಿಇಸಿ
 • ಈ ಬಾರಿ 17.4 ಲಕ್ಷ ವಿವಿಪ್ಯಾಟ್‌ ಯಂತ್ರಗಳನ್ನು ಬಳಸಲಾಗುತ್ತದೆ.
 • ಇವಿಎಂ ಮತ್ತು ವಿವಿಪ್ಯಾಟ್‌ ಯಂತ್ರಗಳನ್ನು ಜನತೆಗೆ ಪರಿಚಯಿಸಲು ಕ್ರಮ ಕೈಗೊಳ್ಳಲಾಗುವುದು.
 • 16ನೇ ಲೋಕಸಭೆ ಅವಧಿ ಜೂನ್ 3ಕ್ಕೆ ಕೊನೆಗೊಳ್ಳುತ್ತದೆ.
 • ಎಲ್ಲ ಪ್ರಮುಖ ಘಟನೆಗಳನ್ನು ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಗುತ್ತದೆ.
 • ಅಭ್ಯರ್ಥಿಗಳು ತಮ್ಮ ಎಲ್ಲ ಸಾಮಾಜಿಕ ಜಾಲತಾಣ ಖಾತೆಗಳ ವಿವರ ನೀಡಬೇಕಾಗುತ್ತದೆ: ಸಿಇಸಿ
 • ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ

Comments are closed.