ರಾಷ್ಟ್ರೀಯ

ಪುಲ್ವಾಮ ಉಗ್ರರ ದಾಳಿ ಮಾಸ್ಟರ್ ಮೈಂಡ್ ಎನ್ ಕೌಂಟರ್ ನಲ್ಲಿ ಹತ್ಯೆ: ಅಧಿಕಾರಿಗಳು

Pinterest LinkedIn Tumblr

ಶ್ರೀನಗರ: ಫೆಬ್ರವರಿ 14 ರಂದು ನಡೆಯ ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಗೆ ಕಾರಣನಾದ ಮಾಸ್ಟರ್ ಮೈಂಡ್ ಇಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಥ್ರಾಲ್ ನಲ್ಲಿ ಮಧ್ಯರಾತ್ರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಶ್ -ಇ-ಮೊಹಮದ್ ಸಂಘಟನೆಯ ಭಯೋತ್ಪಾದಕ ಮುದಾಸಿರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್, ಸೇರಿದಂತೆ ಮೂವರು ಉಗ್ರರು ಬಲಿಯಾಗಿದ್ದಾರೆ.

ಮೂವರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Comments are closed.