ನವದೆಹಲಿ: ಟರ್ಕಿ ಅಧ್ಯಕ್ಷ ರೆಸೆಪ್ ಟೆಯಿಪ್ ಎರ್ಡೋಗನ್ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಈ ವೇಳೆಯಲ್ಲಿ ಇತ್ತೀಚಿಗೆ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬ ವರ್ಗಕ್ಕೆ ಎರ್ಡೋಗನ್ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ ಎಂಬುದು ತಿಳಿದುಬಂದಿದೆ.
ಭಯೋತ್ಪಾದನೆ ಜಾಗತಿಕ ಶಾಂತಿ ಹಾಗೂ ಭದ್ರತೆಗೆ ಮಾರಕ ಬೆದರಿಕೆ ಆಗಿದ್ದು, ಭಯೋತ್ಪಾದನೆ ವಿರುದ್ಧ ಎಲ್ಲ ರಾಷ್ಟ್ರಗಳು ಒಗ್ಗೂಡಿ ದಿಟ್ಟ ನಿರ್ಧಾರ ಕೈಗೊಳ್ಳಬೇಕಾದ ಅಗತ್ಯದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನಲಾಗಿದೆ.
ಟರ್ಕಿ ಅಧ್ಯಕ್ಷರು ಕೂಡಾ ಭಯೋತ್ಪಾದನೆಯ ನಿರ್ಮೂಲನೆ ಬಗ್ಗೆ ಮಾತನಾಡಿದ್ದು, ಪುಲ್ವಾಮಾ ಉಗ್ರರ ದಾಳಿಯನ್ನು ಖಂಡಿಸಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪುಲ್ವಾಮಾದಲ್ಲಿ ಕಳೆದ ತಿಂಗಳು 14 ರಂದು ಜೈಷ್ – ಇ- ಮೊಹಮ್ಮದ್ ಸಂಘಟನೆ ಆತ್ಮಾಹತ್ಯಾ ಬಾಂಬರ್ ನಡೆಸಿದ ದಾಳಿಯಲ್ಲಿ ಸಿಆರ್ ಪಿಎಫ್ ನ 40 ಸಿಬ್ಬಂದಿ ಹುತಾತ್ಮರಾಗಿದ್ದರು.
Comments are closed.