ರಾಷ್ಟ್ರೀಯ

ಮನಮೋಹನ್ ಸಿಂಗ್ ಅವಧಿಯಲ್ಲಿ 25-30 ಬಾರಿ ಸರ್ಜಿಕಲ್ ಸ್ಟ್ರೈಕ್: ಕಾಂಗ್ರೆಸ್ ಸಚಿವ

Pinterest LinkedIn Tumblr


ಹೊಸದಿಲ್ಲಿ: ಹಿಂದಿನ ಯುಪಿಎ ಸರಕಾರ ಸುಮಾರು 25-30 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಆದರೆ, ಇದನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರಲಿಲ್ಲ ಎಂದು ಎಂದು ಮಧ್ಯಪ್ರದೇಶ ಕಾಂಗ್ರೆಸ್ ಸಚಿವ ಗೋವಿಂದ್ ಸಿಂಗ್ ಹೇಳಿದರು.

ನಮ್ಮ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಪ್ರಧಾನಿ ಮನ ಮೋಹನ್ ಸಿಂಗ್ ಅವರ ಆದೇಶದಂತೆ 25 ರಿಂದ 30 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು. ಆದರೆ ನಾವಿದನ್ನು ಪ್ರಚಾರಕ್ಕೆ ಬಳಸಿಕೊಳ್ಳಲಿಲ್ಲ ಎಂದು ಹೇಳಿರುವ ಅವರು, 2014ರಲ್ಲಿ ಅಧಿಕಾರಕ್ಕೇರಿದ್ದ ಮೋದಿ ಸರಕಾರ ನಾಲ್ಕುವರೆ ವರ್ಷಗಳ ಕಾಲ ಸುಮ್ಮನಿದ್ದು, ಮತ್ತೀಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಹೇಳಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಪಡೆಯಲು ಷಡ್ಯಂತ್ರ ರೂಪಿಸಿ, ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಭಾರತೀಯ ಸೇನೆಯ ವರ್ಚಸ್ಸು ಕೆಡುತ್ತಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹಿಂದೂ ಎನ್ನುವುದಕ್ಕೆ ಸಾಕ್ಷಿಯಾಗಿ ಅವರ ತಂದೆ-ತಾಯಿಯ ಡಿಎನ್‌ಎ ತಂದು ಕೊಡಿ ಎಂದು ಗೋವಿಂದ್ ಸಿಂಗ್ ತಿರುಗೇಟು ನೀಡಿದ್ದಾರೆ.

ಕೇಂದ್ರ ಸಚಿವ ಹೆಗಡೆ ಅವರ ತಂದೆ-ತಾಯಿಯ ಡಿಎನ್‌ಎ ಮಾದರಿ ತಂದು ಕೊಡಲಿ. ಡಿಎನ್‌ಎ ಪರೀಕ್ಷಿಸಿ ಹೆಗಡೆ ಜಾತಿ ಯಾವುದು ಎನ್ನುವುದನ್ನು ಪತ್ತೆ ಮಾಡೋಣ. ಕೀಳು ಮಟ್ಟದ ಪದ ಬಳಕೆ ಮಾಡುವ ಮೂಲಕ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಇಂಥವರ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ ಎಂದು ಅವರು ಹೇಳಿದ್ದಾರೆ.

Comments are closed.