ರಾಷ್ಟ್ರೀಯ

ನಟ ಶತೃಘ್ನ ಸಿನ್ಹಾ ಬದಲು ರವಿಶಂಕರ್ ಪ್ರಸಾದ್’ರನ್ನು ಕಣಕ್ಕಿಳಿಸಲು ಮುಂದಾಗಿರುವ ಬಿಜೆಪಿ

Pinterest LinkedIn Tumblr

ಪಾಟ್ನಾ: ನಿರಂತರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ನಟ ಹಾಗೂ ಬಿಜೆಪಿ ನಾಯಕ ಶತೃಘ್ನ ಸಿನ್ಹಾ ಅವರ ಬದಲಿದೆ ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಶತೃಘ್ನ ಸಿನ್ಹಾ ಪಕ್ಷೇತರವಾಗಿ ಅಥವಾ ಮಹಾಘಟಬಂಧನದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಶೀಘ್ರವೇ ಮೊದಲ ಪಟ್ಟಿ ರಿಲೀಸ್ ಮಾಡಲಿದ್ದು, ಸದ್ಯ ರಾಜ್ಯಸಭಾ ಸದಸ್ಯರಾಗಿರುವ ರವಿಶಂಕರ ಪ್ರಸಾದ್ ಅವರನ್ನ ಕಣಕ್ಕಿಳಿಸಲು ನಿರ್ಧರಿಸಿಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ಶತೃಘ್ನ ಸಿನ್ಙಾ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬಸ್ಥರನ್ನು ಭೇಟಿಯಾಗಿದ್ದರು. ಜೊತೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಸಹ ಭೇಟಿ ಮಾಡಿದ್ದರು ಎಂದು ತಿಳಿದು ಬಂದಿದೆ.

Comments are closed.