ನವದೆಹಲಿ: ಭಾರತದಲ್ಲಿ ಇನ್ನೂ ಒಂದು ಉಗ್ರ ದಾಳಿ ನಡೆದರೂ ಗ್ರಹಚಾರ ನೆಟ್ಟಗಿರಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪಾಕ್ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಸದ್ಯ ಕೊತ್ತ ಕೊತ ಅಂತ ಕುದಿಯುತ್ತಿದೆ. ಒಂದು ಕಡೆ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಇನ್ನೊಂದೆಡೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಬರಮುಲ್ಲಾದ ಸೊಪೊರೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇಬ್ಬರು ಜಮ್ಮು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ಭಾರತೀಯ ಯೋಧರು ಉಗ್ರರ ದಮನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧನನ್ನು 24 ವರ್ಷದ ಯಶ್ ಪೌಲ್ ಎಂದು ತಿಳಿದುಬಂದಿದೆ.
Comments are closed.