ರಾಷ್ಟ್ರೀಯ

ಬಿಜೆಪಿ ಸೇರಲು ಕಾಂಗ್ರೆಸ್ ಗೆ ‘ಕೈ’ ಕೊಟ್ಟ ಮಾಜಿ ಸಂಸದ!

Pinterest LinkedIn Tumblr


ಲೋಕಸಭೆ ಚುನಾವಣೆ ಕಾವು ಜೋರಾಗಿದ್ದು ಈ ನಡುವೆ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು ಮಾಜಿ ಸಂಸದ ಹಾಗೂ ಜಿಲ್ಲಾಧ್ಯಕ್ಷ ರಾಜಿನಾಮೆ ನೀಡಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಲೆನೋವಾಗಿ ಪರಿಣಮಿಸಿದೆ.
ಮಹಾರಾಷ್ಟ್ರದ ಸಂಗ್ಲಿಯ ಪ್ರತೀಕ್ ಪಾಟೀಲ್ ಮತ್ತು ಸತಾರಾದ ರಂಜಿತ್ ಸಿಂಗ್ ನಾಯ್ಕ್ ನಿಂಬಾಳ್ಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಪ್ರತೀಕ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತ್ ದಾದಾ ಪಾಟೀಲ್ ಅವರ ಪುತ್ರ ಕಾಂಗ್ರೆಸ್ ಮುಖಂಡ ಪ್ರಕಾಶ್ ಪಾಟೀಲ್ ಪುತ್ರ.
ಇನ್ನು ನಿಂಬಾಳ್ಕರ್ ಅವರು ಕಾಂಗ್ರೆಸ್ ಸತಾರದ ಜಿಲ್ಲಾ ಅಧ್ಯಕ್ಷ. ಬಿಜೆಪಿ ಸೇರಿರುವ ನಿಂಬಾಳ್ಕರ್ ಅವರು ಮದಾದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಸಚಿವ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.
ಇನ್ನು ಕಾಂಗ್ರೆಸ್ ನ ನಾಯಕರು ಕ್ರಮವಾಗಿ ರಾಜಿನಾಮೆ ನೀಡುತ್ತಿರುವುದು ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

Comments are closed.