ರಾಷ್ಟ್ರೀಯ

ನಟಿ ಜಯಪ್ರದಾ ಬಿಜೆಪಿ ಸೇರಿ ರಾಂಪುರದಿಂದ ಸ್ಪರ್ಧಿಸುವ ಸಾಧ್ಯತೆ!

Pinterest LinkedIn Tumblr


ನವದೆಹಲಿ: ಸಮಾಜವಾದಿ ಪಕ್ಷದ ಟಿಕೆಟ್ ನಿಂದ ಸಂಸತ್ ಸದಸ್ಯೆಯಾಗಿದ್ದ ನಟಿ ಜಯಪ್ರದಾ ಬಿಜೆಪಿ ಸೇರಲಿದ್ದು, ರಾಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿಯೂ ರಾಂಪುರ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಜಯಪ್ರದಾಗೆ ಈ ಬಾರಿ ಸಮಾಜವಾದಿ ಪಕ್ಷದಿಂದ ಟಿಕೆಟ್ ದೊರೆಯದ ಕಾರಣ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ಜಯಪ್ರದಾ ಸಮಾಜವಾದಿ ಪಕ್ಷಕ್ಕೆ ಕರೆತಂದಿದ್ದರು. ಬಳಿಕ ರಾಂಪುರ ಕ್ಷೇತ್ರದಿಂದ ಟಿಕೆಟ್ ಕೊಡಿಸಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷದ ಹಿರಿಯ ನಾಯಕ ಅಜಂ ಖಾನ್ ಸಹಕರಿಸಿದ್ದರು. ಆದರೆ ಈ ಬಾರಿ ರಾಂಪುರ ಕ್ಷೇತ್ರದಿಂದ ಸಮಾಜವಾದಿ ಪಕ್ಷ ಅಜಂ ಖಾನ್ ಅವರಿಗೆ ಟಿಕೆಟ್ ನೀಡಿದ್ದರಿಂದ ಜಯಪ್ರದಾ ಆ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿದ್ದಾರೆ. ಹಾಗಾಗಿ ಬಿಜೆಪಿಯಿಂದ ಅದೇ ಕ್ಷೇತ್ರದಲ್ಲಿ ಕಣಕ್ಕಿಳಿದು ಅಜಂ ಖಾನ್ ಗೆ ನೇರ ಸ್ಪರ್ಧೆ ನೀಡಲು ಜಯಾ ಮುಂದಾಗಿದ್ದಾರೆ ಎನ್ನಲಾಗಿದೆ.

Comments are closed.