ರಾಷ್ಟ್ರೀಯ

ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ

Pinterest LinkedIn Tumblr

ಕಾನ್ಪುರ್: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸ್ಪರ್ಧಿಸುತ್ತಿಲ್ಲ, ಪಕ್ಷ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ಪರ್ದೆಯಿಂದ ಹಿಂದೆ ಸರಿದಿದ್ದಾರೆ.

ಈ ಸಂಬಂಧ ಕಾನ್ಪುರ ಜನತೆಗೆ ಪತ್ರ ಬರೆದಿರುವ ಮುರಳಿ ಮನೋಹರ್ ಜೋಶಿ, ಮೆಚ್ಚಿನ ಕಾನ್ಪುರ ಜನತೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರು ಇಂದು ನನ್ನ ಭೇಟಿ ಮಾಡಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರುವಂತೆ ಹೇಳಿದ್ದಾರೆ, ಕಾನ್ಪುರ ಮತ್ತು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ದಿಸದಿರುವಂತೆ ಹೇಳಿದ್ದಾರೆ ಹೀಗಾಗಿ ನಾನು ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ ಆಡ್ವಾಣಿ ಅವರ ಜೊತೆ ಸೇರಿ ಬಿಜೆಪಿ ಕಟ್ಟುವಲ್ಲಿ ಜೋಶಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ ಕೆ ಆಡ್ವಾಣಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ, ಇದರ ಜೊತೆಗೆ ಮನೋಹರ್ ಜೋಶಿ ಅವರು ಕೂಡ ಸ್ಪರ್ಧಿಸುತ್ತಿಲ್ಲ.

85 ವರ್ಷದ ಜೋಷಿ 2014 ರಲ್ಲಿ ವಾರಣಾಸಿ ಕ್ಷೇತ್ರವನ್ನು ಪ್ರಧಾನಿ ಮೋದಿ ಅವರಿಗೆ ಬಿಟ್ಟುಕೊಟ್ಟಿದ್ದರು, 2014ರಲ್ಲಿ ಕಾನ್ಪುರದಿಂದ ಸ್ಪರ್ಧಿಸಿದ್ದರು.

Comments are closed.