ರಾಷ್ಟ್ರೀಯ

ಲೋಕಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

Pinterest LinkedIn Tumblr


ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗಾಗಿ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪಕ್ಷದ ಪರ ಪ್ರಚಾರ ಮಾಡಲು ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಹೆಸರುಗಳನ್ನು ಮಂಗಳವಾರ ಘೋಷಿಸಿದೆ.

ಕಾಂಗ್ರೆಸ್ ನಿಂದ ಬಿಡುಗಡೆಗೊಂಡಿರುವ ಈ ಪಟ್ಟಿಯಲ್ಲಿ ಚುನಾವಣಾ ಕಣ ರಂಗೇರಿಸಲು ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 40 ತಾರಾ ಪ್ರಚಾರಕರ ಹೆಸರನ್ನು ಪ್ರಕಟಿಸಲಾಗಿದೆ.

ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 11 ಮತ್ತು 18 ರಂದು ಮೊದಲ ಎರಡು ಹಂತಗಳಲ್ಲಿ ಐದು ಕ್ಷೇತ್ರಗಳು ಚುನಾವಣೆಗೆ ಹೋಗಲಿವೆ. ಮೂರನೇ ಹಂತದಲ್ಲಿ (ಏಪ್ರಿಲ್ 23) ನಾಲ್ಕು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿವೆ. ಏತನ್ಮಧ್ಯೆ, ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿ ಏಳು ಹಂತಗಳಲ್ಲಿ(ಏಪ್ರಿಲ್ 11, 18 , 23, 29, ಮೇ 6, 12 ಮತ್ತು 19) ಮತದಾನ ನಡೆಯಲಿದೆ.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಶ್ಚಿಮ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿ ಪಶ್ಚಿಮ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಚುನಾವಣಾ ರ‍್ಯಾಲಿಗಳು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ.

ಅಹ್ಮದ್ ಪಟೇಲ್ ಮತ್ತು ಹರೀಶ್ ರಾವತ್ ಮುಂತಾದ ಹಿರಿಯ ಮುಖಂಡರ ಹೆಸರುಗಳು ಈಸ್ಟರ್ನ್ ರಾಜ್ಯದ ಪ್ರಚಾರಕರ ಪಟ್ಟಿಯಲ್ಲಿ ಸೇರಿವೆ. ಉತ್ತರ ಪ್ರದೇಶದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ ಬಬ್ಬರ್ ಮತ್ತು ಹಿರಿಯ ಪಕ್ಷದ ನಾಯಕರು ಗುಲಾಮ್ ನಬಿ ಆಜಾದ್ ಮತ್ತು ಅಶೋಕ್ ಗೆಹ್ಲೋಟ್ ಸ್ಥಾನ ಪಡೆದುಕೊಂಡಿದ್ದಾರೆ.

ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತದಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ. ಮೇ 23 ರಂದು ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ.

Comments are closed.