ರಾಷ್ಟ್ರೀಯ

ಹಾಸನ ಕಾಂಗ್ರೆಸ್ ನಾಯಕರಿಂದ ಸಾಮೂಹಿಕ ರಾಜೀನಾಮೆ!

Pinterest LinkedIn Tumblr


ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ.

ಹಾಸನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಥರ್ ಗೌಡ ವಜಾ ಹಿನ್ನೆಲೆ ಹಲವರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

DUCC ಉಪಾಧ್ಯಕ್ಷ ಹಾಗೂ ಇತರೆ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅರಕಲಗೂಡುತಾಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡೆಗಳಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾಗಿ ನಾಯಕರು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ನಿಂದ ವಜಾಗೊಂಡಿರುವ ಮಂಥರ್ ಗೌಡ ತಂದೆ ಎ. ಮಂಜು ಹಾದಿ ತುಳಿಯುವರೇ ಎನ್ನುವ ಪ್ರಶ್ನೆಯೂ ಕೂಡ ಎದುರಾಗಿದೆ.

ಎ. ಮಂಜು ಕಾಂಗ್ರೆಸ್ ನಲ್ಲಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದು, ಹಾಸನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

Comments are closed.