ರಾಷ್ಟ್ರೀಯ

ರೈತರಿಗೆ 1 ಲಕ್ಷ ರೂ. ಬಡ್ಡಿ ರಹಿತ ಸಾಲ; ಬಿಜೆಪಿ ಪ್ರಣಾಳಿಕೆ ಹೈಲೈಟ್ಸ್​

Pinterest LinkedIn Tumblr


ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮೂರು ದಿನ ಉಳಿದಿರುವಾಗ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಳೆದ ವಾರ ಕಾಂಗ್ರೆಸ್​ ರಾಷ್ಟ್ರಾಧ್ಯಕ್ಷ ರಾಹುಲ್​ ಗಾಂಧಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದರು. ಸಾಮಾನ್ಯ ಕನಿಷ್ಠ ವೇತನ ಮತ್ತು ಬಡತನ ನಿರ್ಮೂಲನೆಯನ್ನೇ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಕೇಂದ್ರೀಕರಿಸಿತ್ತು.

ರಾಷ್ಟ್ರೀಯ ಭದ್ರತೆ, ರಾಮಮಂದಿರ ನಿರ್ಮಾಣ, ಕಾಶ್ಮೀರಕ್ಕೆ ನೀಡಿರುವ ವಿಶೇಷ ಸವಲತ್ತು ರದ್ದುಗೊಳಿಸುವ ಆಶ್ವಾಸನೆಯನ್ನು ಹೊತ್ತು ಬಿಜೆಪಿ ಪ್ರಣಾಳಿಕೆ ಹೊರಬಂದಿದೆ. ಇಂದು ಬಿಡುಗಡೆಯಾದ ಬಿಜೆಪಿಯ ಪ್ರಣಾಳಿಕೆಯ ಹೈಲೈಟ್ಸ್​ ಈ ಕೆಳಗಿನಂತಿದೆ.
ಸಂವಿಧಾನದ ವಿಧಿ 370, 35 ಎ, ರದ್ದುಗೊಳಿಸುವ ಭರವಸೆ. ಕಾಶ್ಮೀರಕ್ಕೆ ವಿಶೇಷ ಸವಲತ್ತುಕೊಡುವ ವಿಧಿ ರದ್ದು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ.
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 1 ಲಕ್ಷ ರೂ. ವರೆಗೆ ಸಾಲ.
ಕಿಸಾನ್​ ಕ್ರೆಡಿಟ್​ ಕಾರ್ಡ್​ ಮೂಲಕ ಕೃಷಿ ಸಾಲ.
ಸಣ್ಣ ರೈತರಿಗೆ ಪಿಂಚಣಿ ಯೋಜನೆ.
60 ವರ್ಷ ಮೀರಿದ ರೈತರಿಗೆ ಪಿಂಚಣಿ.
ಏಕರೂಪದ ನಾಗರಿಕ ಸಂಹಿತೆ ಜಾರಿಗೆ ಕ್ರಮ.
2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ.
ಕಿಸಾನ್​ ಸಮ್ಮಾನ್​ ನಿಧಿ ಯೋಜನೆ.
ಭೂ ದಾಖಲೆಗಳ ಡಿಜಿಟಲೀಕರಣ.
ಮೀನುಗಾರರಿಗೆ ಮತ್ಸ್ಯ ಸಂಪದ ಯೋಜನೆ.
ಉನ್ನತ ಶಿಕ್ಷಣಕ್ಕೆ 1 ಲಕ್ಷ ಕೋ. ಅನುದಾನ.
ವೃತ್ತಿ ಶಿಕ್ಷಣದಲ್ಲಿ ಶೇ.50ರಷ್ಟು ಸೀಟು ಹೆಚ್ಚಳ.
ದೇಶದ ಪ್ರತಿ ಕುಟುಂಬಕ್ಕೂ ಮನೆ ಖಾತ್ರಿ.
ಎಲ್ಲ ಬಡ ಕುಟುಂಬಕ್ಕೂ ಎಲ್​ಪಿಜಿ ಸೌಲಭ್ಯ.
ದೇಶದ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕ.
ಎಲ್ಲ ನಾಗರಿಕರಿಗೂ ಬ್ಯಾಂಕ್​ ಖಾತೆ ಓಪನ್.
ಪ್ರತಿ ಮನೆಯಲ್ಲೂ ಶೌಚಾಲಯ ವ್ಯವಸ್ಥೆ.
ಎಲ್ಲರಿಗೂ ಶುದ್ಧ ಕುಡಿಯುವ ನೀರಿನ ಸೌಲಭ್ಯ.
ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ.
ಜಿಎಸ್​ಟಿ ವ್ಯವಸ್ಥೆಯ ಸರಳೀಕರಣ.
ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬಿ.
ಕೃಷಿ, ಗ್ರಾಮೀಣ ಅಭಿವೃದ್ಧಿಗಾಗಿ 25 ಲಕ್ಷ ಕೋಟಿ ಅನುದಾನ.
ರಾಷ್ಟ್ರೀಯ ವ್ಯಾಪಾರಿ ಆಯೋಗ ರಚನೆ.
75 ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.
5 ಕಿ.ಮೀ. ಅಂತರದಲ್ಲಿ ಬ್ಯಾಂಕಿಂಗ್​ ವ್ಯವಸ್ಥೆ.
ನ್ಯಾಯಾಲಯಗಳ ಸಂಪೂರ್ಣ ಡಿಜಿಟಲೀಕರಣ.
ಡಿಜಿಟಲ್​ ಬ್ಯಾಂಕಿಂಗ್​ಗೆ ಉತ್ತೇಜನ.

Comments are closed.