ರಾಷ್ಟ್ರೀಯ

ಜನರ ಬ್ಯಾಂಕ್ ಅಕೌಂಟ್ ಗೆ 15 ಲಕ್ಷ ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ: ರಾಜನಾಥ್ ಸಿಂಗ್

Pinterest LinkedIn Tumblr

ನವದೆಹಲಿ: 2014 ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಜನರ ಬ್ಯಾಂಕ್ ಅಕೌಂಟ್ ಗೆ 15 ಲಕ್ಷ ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಜನರ ಅಕೌಂಟ್ ಗೆ 15 ಲಕ್ಷ ಹಣ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಚಪಡಿಸಿದ್ದಾರೆ.

ನಾವು ಕಪ್ಪು ಹಣದ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದೆವು, ಅದರಂತೆ ಕ್ರಮ ತೆಗೆದುಕೊಂಡಿದ್ದೇವೆ, ಕಪ್ಪು ಹಣ ವಾಪಸ್ ತರಿಸಿದ್ದೇವೆ ಎಂದು ಹೇಳಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 15 ಲಕ್ಷ ರು ಹಣವನ್ನು ದೇಶದ ಜನರ ಆಕೌಂಟ್ ಗೆ ಹಾಕುವುದಾಗಿ ಭರವಸೆ ನೀಡಿತ್ತು, ಆದರೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

Comments are closed.