ರಾಷ್ಟ್ರೀಯ

ಮೂರು ವರ್ಷಗಳ ಪದವಿ ಪೂರ್ಣಗೊಳಿಸಿಲ್ಲ ಎಂದ ಸ್ಮೃತಿ ಇರಾನಿ

Pinterest LinkedIn Tumblr


ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ವಿವಾದಕ್ಕೆ ತೆರೆ ಎಳೆದಿದ್ದಾರೆ.

ದೆಹಲಿ ಮುಕ್ತ ವಿಶ್ವವಿದ್ಯಾಲಯದಿಂದ ಬಿ.ಕಾಂ ಮೊದಲ ವರ್ಷದ ಪರೀಕ್ಷೆಗೆ ತಾನು ಹಾಜರಾಗಿದ್ದೆ. ಆದರೆ, ಮೂರು ವರ್ಷಗಳ ಪದವಿಯನ್ನು ಪೂರ್ಣಗೊಳಿಸಿಲ್ಲ ಎಂದು ಸ್ಮೃತಿ ಇರಾನಿ ಅವರು ಗುರುವಾರ ಅಮೇಠಿಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಬಹಿರಂಗಪಡಿಸಿದ್ದಾರೆ.

2004ರಲ್ಲಿ ದೆಹಲಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಇರಾನಿ ತಾವು ದೆಹಲಿ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿ ಪೂರೈಸಿದ್ದಾಗಿ ಹೇಳಿಕೊಂಡಿದ್ದರು. ಆದರೆ, 2014ರಲ್ಲಿ ಚುನಾವಣೆಗೆ ಸ್ಪರ್ಧಿಸುವ ವೇಳೆ ಸ್ಮೃತಿ ಇರಾನಿತ ತಾವು ಬಿ.ಕಾಂ ಪದವಿ ಪೂರೈಸಿದ್ದಾಗಿ ಪ್ರಮಾಣಪತ್ರ ಸಲ್ಲಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.

Comments are closed.