ರಾಷ್ಟ್ರೀಯ

ರಾಹುಲ್, ಸುಮಲತಾ ಆಯಿತು….ಈಗ ಮೋದಿಗೆ ತದ್ರೂಪಿ ಮೋದಿಯ ಸವಾಲು!

Pinterest LinkedIn Tumblr

ಲಖನೌ: ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆ ಮತ್ತು ವಯನಾಡ್ ನಲ್ಲಿ ರಾಹುಲ್ ಗಾಂಧಿಗೆ ಅವರದೇ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಯ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರದೇ ತದ್ರೂಪು ಮೋದಿ ಸವಾಲೆಸೆದಿದ್ದಾರೆ.

ಹೌದು.. ನೋಡಲು ಪ್ರಧಾನಿ ನರೇಂದ್ರ ಮೋದಿಯಂತೆಯೇ ಕಾಣುವ ವ್ಯಕ್ತಿಯೊಬ್ಬರು ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೆಣಸಲು ಸಜ್ಜಾಗಿದ್ದಾರೆ. ಅಭಿನಂದನ್ ಪಾಠಕ್ ಎನ್ನುವ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧೆ ಮಾಡಲು ನಿರ್ಧರಿಸಿದ್ದು, ಇದೇ 26ರಂದು ವಾರಣಾಸಿಯಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಅಂತೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವನ್ನು ತೀವ್ರವಾಗಿ ಟೀಕಿಸಿರುವ ಅವರು, ನಾನು ಯಾವುದೇ ವ್ಯಕ್ತಿ ಅಥವಾ ಪಕ್ಷದ ವಿರುದ್ಧವಲ್ಲ. ಆದರೆ ನರೇಂದ್ರ ಮೋದಿ ಅವರ ಜುಮ್ಲಾ ರಾಜಕೀಯದ ವಿರುದ್ಧ. ಇದೇ ಕಾರಣಕ್ಕೆ ಅವರ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿದ್ದೇನೆ. ನಾನು ಡಮ್ಮಿ ಅಭ್ಯರ್ಥಿಯಲ್ಲ ಎಂದು ಹೇಳಿದ್ದಾರೆ.

ಇನ್ನು ಇಂದು ಲಖನೌನಲ್ಲಿ ನಾಮಪತ್ರ ಸಲ್ಲಿಸಿದ ಅಭಿನಂದನ್ ಪಾಠಕ್ ನಾನು ಚುನಾವಣೆಯಲ್ಲಿ ಗೆದ್ದ ಬಳಿಕ ರಾಹುಲ್ ಗಾಂಧಿ ಅವರ ಪ್ರಧಾನಿ ಹುದ್ದೆಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ್ದಾರೆ.

Comments are closed.