
ನವದೆಹಲಿ: ರಾಫೆಲ್ ಫೈಟರ್ ಜೆಟ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಆಡಳಿತಾ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ, ಆರೋಪ ಮಾಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನಿಂದಲೇ ಸಂಕಷ್ಟ ಎದುರಾಗಿದೆ.
ರಾಫೆಲ್ ಪ್ರಕರಣದಲ್ಲಿ ತನ್ನ ಆದೇಶವನ್ನು ತಪ್ಪಾಗಿ ಉಲ್ಲೇಖ ಮಾಡಿದ್ದಾರೆ ಎಂದು ಸ್ವತಃ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದೆ. ಅಷ್ಟೇ ಅಲ್ಲದೇ ಬಿಜೆಪಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಬೇಕೆಂದು ಕೋರ್ಟ್ ರಾಹುಲ್ ಗಾಂಧಿಗೆ ಸೂಚನೆ ನೀಡಿದೆ.
ರಾಫೆಲ್ ಪ್ರಕರಣದಲ್ಲಿ ಕೋರ್ಟ್ ತೀರ್ಪನ್ನು ರಾಹುಲ್ ಗಾಂಧಿ ಮಾಧ್ಯಮ ಹಾಗೂ ಸಾರ್ವಜನಿಕವಾಗಿ ತಪ್ಪಾಗಿ ಉಲ್ಲೇಖಿಸಿದ್ದಾರೆ. ರಾಹುಲ್ ಗಾಂಧಿ ಉಲ್ಲೇಖಿಸಿರುವಂತೆ ಕೋರ್ಟ್ ಎಲ್ಲಿಯೂ ಅಂತಹ ಅಂಶಗಳನ್ನು ಹೇಳಿಲ್ಲ ಎಂದು ನ್ಯಾ. ರಂಜನ್ ಗೊಗೋಯ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
Comments are closed.