ರಾಷ್ಟ್ರೀಯ

ಗುಜರಾತ್’ನಲ್ಲಿ ಭಾರಿ ಮಳೆ, ಧೂಳು ಸಹಿತ ಚಂಡಮಾರುತ; ಕನಿಷ್ಠ 35 ಸಾವು-ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Pinterest LinkedIn Tumblr

ಅಹ್ಮದಾಬಾದ್: ಗುಜರಾತ್ ನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಈ ವರೆಗೂ ಕನಿಷ್ಛ 35 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಗುಜರಾತ್ ಮತ್ತು ಸೌರಾಷ್ಟ್ರ ಪ್ರಾಂತ್ಯದಲ್ಲಿ ಕಳೆದ 2 ದಿನಗಳಿಂದ ಸುರಿದ ಅಕಾಲಿಕ ಭಾರಿ ಮಳೆ ಹಾಗೂ ಧೂಳು ಸಹಿತ ಚಂಡಮಾರುತ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದ್ದು, ಈವರೆಗೂ ಸುಮಾರು 35 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅಂತೆಯೇ ಹಲವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಜಿಬಿ ಮಂಗ್ಲಪಾರಾ ಹೇಳಿದ್ದಾರೆ.

ಉತ್ತರ ಗುಜರಾತ್ ಭಾಗದಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಸಾವು ಸಂಭವಿಸಿದ್ದು, ಇಲ್ಲಿ ಸಂಭವಿಸಿದ ಭಾರಿ ಗುಡುಗು ಮತ್ತು ಮಿಂಚಿನಿಂದಾಗಿ ಹತ್ತಾರು ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿಸಿವೆ ಎಂದು ತಿಳಿದುಬಂದಿದೆ.

ಇನ್ನು ಅತ್ತ ಉತ್ತರ ಗುಜರಾತ್ ಮಳೆಯಿಂದಾಗಿ ತತ್ತರಿಸಿದ ಸುದ್ದಿ ಬಿತ್ತರವಾಗುತ್ತಲೇ ಪ್ರಧಾನಿ ನರೇಂದ್ರ ಮೋದಿ ಸಂತ್ರಸ್ಥರಿಗೆ ತಮ್ಮ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಿದ್ದಾರೆ. ಅದರಂತೆ ಸಾವಿಗೀಡಾಡದವರ ಕುಟುಂಬಕ್ಕೆ ತಲಾ 2 ಲಕ್ಷ ರೂ ಹಾಗು ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಗುಜರಾತ್ ನ ಹಮ್ಮತ್ ಪುರದಲ್ಲಿ ನಡೆದ ರ್ಯಾಲಿ ವೇಳೆಯಲ್ಲೂ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು.

Comments are closed.