ರಾಷ್ಟ್ರೀಯ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ತಾನು ಸುಳ್ಳುಗಾರ ಎಂದು ರಾಹುಲ್ ಒಪ್ಪಿಕೊಂಡಿದ್ದಾರೆ; ಸ್ಮೃತಿ ಇರಾನಿ

Pinterest LinkedIn Tumblr


ನವದೆಹಲಿ: ಚೌಕೀದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ನೀಡಿದ್ದ ರಫೇಲ್ ತೀರ್ಪಿನಲ್ಲಿಯೇ ಹೇಳಿರುವುದಾಗಿ ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿತ್ ನಲ್ಲಿ ಕ್ಷಮೆಯಾಚಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ತಾನು ಸುಳ್ಳುಗಾರ ಎಂಬುದನ್ನು ಒಪ್ಪಿಕೊಂಡಂತಾಗಿದೆ ಎಂಬುದಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ರಫೇಲ್ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಯಾವುದೇ ಶಬ್ದ ಉಪಯೋಗಿಸಿಲ್ಲ, ರಾಜಕೀಯ ಜಿದ್ದಾಜಿದ್ದಿಯಲ್ಲಿ ಈ ಹೇಳಿಕೆ ನೀಡಲಾಗಿತ್ತು. ಈ ನಿಟ್ಟಿನಲ್ಲಿ ತಾನು ವಿಷಾದ ವ್ಯಕ್ತಪಡಿಸುವುದಾಗಿ ರಾಹುಲ್ ಗಾಂಧಿ ಕೋರ್ಟ್ ಗೆ ಸಲ್ಲಿಸಿದ್ದ ಅಫಿಡವಿತ್ ನಲ್ಲಿ ಹೇಳಿದ್ದರು. ಸುಪ್ರೀಂಕೋರ್ಟ್ ಬಗ್ಗೆ ಗೌರವವಿದ್ದು, ಉದ್ದೇಶಪೂರ್ವಕವಾಗಿ ಆ ರೀತಿ ನಡೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂನಲ್ಲಿ ವಿಷಾದ ವ್ಯಕ್ತಪಡಿಸಿದ ನಂತರ ಟ್ವೀಟ್ ಮಾಡಿದ್ದ ಸ್ಮೃತಿ ಇರಾನಿ, ಪ್ರಧಾನಿ ಮೋದಿ ಅವರನ್ನು ಚೌಕೀದಾರ್ ಚೋರ್ ಹೈ ಎಂದು ಆರೋಪಿಸಿದ್ದ ರಾಹುಲ್ ಇದೀಗ ತಾನೊಬ್ಬ ಸುಳ್ಳುಗಾರ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ಮತ್ತು ಸುಪ್ರೀಂಕೋರ್ಟ್ ಅನ್ನು ಅವಮಾನಿಸಿದ ನಿಮ್ಮನ್ನು ಸಾರ್ವಜನಿಕರು ಯಾವತ್ತೂ ಕ್ಷಮಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Comments are closed.